By : Ashwini Rathod
Online disk
ನವದೆಹಲಿ: ಪ್ರಯಾಣಿಕರ ಸುರಕ್ಷತೆಯ ಹಿನ್ನೆಲೆಯಲ್ಲಿ ಕಾರುಗಳಲ್ಲಿ ಆರು ಏರ್ ಬ್ಯಾಗ್ ಅಳವಡಿಕೆ ಕಡ್ಡಾಯ ಎಂಬ ಕೇಂದ್ರ ಸರ್ಕಾರದ ನಿಯಮ ಜಾರಿ ದಿನಾಂಕವನ್ನು ಮುಂದೂಡಲಾಗಿದೆ.
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು, ಕಾರುಗಳಲ್ಲಿ ಕನಿಷ್ಠಆರು ಏರ್ ಬ್ಯಾಗ್ ನಿಯಮ ಕಡ್ಡಾಯ ಎಂಬ ಹೊಸ ಕಾಯ್ದೆ 2023ರ ಅಕ್ಟೋಬರ್ 1ರಿಂದ ಅನ್ವಯವಾಗಲಿದೆ” ಎಂದು ತಿಳಿಸಿದ್ದಾರೆ.
ವಾಹನಗಳಲ್ಲಿ ಸಂಚರಿಸುವಾಗ ಎಲ್ಲಾ ಪ್ರಯಾಣಿಕರ ಸುರಕ್ಷತೆ ಮುಖ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕಾರು ಗಳಲ್ಲಿ ಕನಿಷ್ಠ ಆರು ಏರ್ ಬ್ಯಾಗ್ ಗಳು ಇರಬೇಕು ಎಂಬ ನಿಯಮ ಜಾರಿಗೆ ತರಲಾಗುತ್ತಿದೆ ಎಂದು ಗಡ್ಕರಿ ಹೇಳಿದರು.
2022 ಜನವರಿ 14ರಂದು ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯಲ್ಲಿ, MI ಶ್ರೇಣಿಯ ಕಾರುಗಳಲ್ಲಿ ಕನಿಷ್ಠ ಆರು ಏರ್ ಬ್ಯಾಗ್ ಅಳವಡಿಕೆ ನಿಯಮ ಅಕ್ಟೋಬರ್ 1ರಿಂದ ಜಾರಿಯಾಗಲಿದೆ ಎಂದು ತಿಳಿಸಿತ್ತು.
6 ರಿಂದ 8 ಜನ ಪ್ರಯಾಣಿಕರನ್ನು ಕೊಂಡೊಯ್ಯುವ ಕಾರುಗಳಲ್ಲಿ ಕನಿಷ್ಠ ಆರು ಏರ್ ಬ್ಯಾಗ್ ಅನ್ನು ಅಕ್ಟೋಬರ್ ನಿಂದ ಕಡ್ಡಾಯಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಗಡ್ಕರಿ ಕಳೆದ ತಿಂಗಳು ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.
Post a Comment