ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 7,219 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಸೋಂಕಿತರ ಸಂಖ್ಯೆ 4,44,49,726ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಪ್ರಾತಿನಿಧಿಕ ಚಿತ್ರ
By : Rekha
ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 7,219 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಸೋಂಕಿತರ ಸಂಖ್ಯೆ 4,44,49,726ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಶನಿವಾರಕ್ಕೆ ಕೊನೆಗೊಂಡಂತೆ ಕೇರಳದಲ್ಲಿ 8 ಸೇರಿ 24 ಗಂಟೆಗಳ ಅವಧಿಯಲ್ಲಿ 33 ಜನರು ಕೋವಿಡ್‌ನಿಂದ ಮೃತಪಟ್ಟಿದ್ದು, ಒಟ್ಟು 5,27,965 ಜನರು ಈವರೆಗೆ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಸದ್ಯ ದೇಶದಲ್ಲಿ 56,745 ಸಕ್ರಿಯ ಪ್ರಕರಣಗಳಿವೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.13ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಚೇತರಿಕೆ ದರ ಶೇ 98.68ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೈನಂದಿನ ಪಾಸಿಟಿವಿಟಿ ದರ ಶೇ 1.98ರಷ್ಟಿದ್ದು, ಮರಣ ಪ್ರಮಾಣ 1.19ರಷ್ಟಿದೆ. ಈವರೆಗೆ 4,38,65,016 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಸಚಿವಾಲಯದ ಪ್ರಕಾರ, ದೇಶದಾದ್ಯಂತ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 213.01 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.
Post a Comment