ಮುಂದಿನ ಮೂರು ವರ್ಷಗಳಲ್ಲಿ ಮೈಸೂರಿನಲ್ಲಿ ಮೊದಲ ಸೆಮಿಕಂಡಕ್ಟರ್ ಚಿಪ್ ಪ್ಲಾಂಟ್ ಸ್ಥಾಪನೆಯಾಗಲಿದ್ದು, ಇದರಿಂದ 21 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ...
ಕೈಗಾರಿಕಾ ದಸರಾ ಉದ್ಘಾಟನೆ
ಮೈಸೂರು: ಮುಂದಿನ ಮೂರು ವರ್ಷಗಳಲ್ಲಿ ಮೈಸೂರಿನಲ್ಲಿ ಮೊದಲ ಸೆಮಿಕಂಡಕ್ಟರ್ ಚಿಪ್ ಪ್ಲಾಂಟ್ ಸ್ಥಾಪನೆಯಾಗಲಿದ್ದು, ಇದರಿಂದ 21 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಹೇಳಿದ್ದಾರೆ.
ಕೈಗಾರಿಕಾ ದಸರಾ ಉದ್ಘಾಟಿಸಿ ಮಾತನಾಡಿದ ನಿರಾಣಿ ಅವರು, ಸೆಮಿಕಂಡಕ್ಟರ್ ಚಿಪ್ ಪ್ಲಾಂಟ್ ಗೆ ಬೇಕಾದ ಅಗತ್ಯ ಸೌಲಭ್ಯ ನೀಡಲಾಗುವುದು. ಇದು ನೇರವಾಗಿ 6,000 ಮತ್ತು ಪರೋಕ್ಷವಾಗಿ 15,000 ಉದ್ಯೋಗಗಳನ್ನು ಒದಗಿಸುತ್ತದೆ ಎಂದಿದ್ದಾರೆ.
ಬಹುರಾಷ್ಟ್ರೀಯ ಕಂಪನಿ ಐಎಸ್‍ಎಂಸಿಯು ಸುಮಾರು 23 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುತ್ತಿದ್ದು, ಸೆಮಿ ಕಂಡಕ್ಟರ್ ಪ್ಯಾಬ್ ಸ್ಥಾಪಿಸಲು ರಾಜ್ಯ ಸರ್ಕಾರೊಂದಿಗೆ ಎಂಒಯುಗೆ ಸಹಿ ಹಾಕಿದೆ. ಇದರಿಂದ ಈ ಭಾಗದಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಸಾಕಷ್ಟು ಕೈಗಾರಿಕೆಗಳು ಸ್ಥಾಪನೆಯಾಗಿರುವುದರಿಂದ ನಮ್ಮ ಸರ್ಕಾರ 2 ಮತ್ತು 3ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚು ಒತ್ತು ಕೊಡುತ್ತಿದೆ. ಮೈಸೂರು ಕೂಡ ನಮ್ಮ ಆದ್ಯತೆಯ ನಗರಗಳಲ್ಲಿ ಒಂದಾಗಿದೆ ಎಂದು ನಿರಾಣಿ ಹೇಳಿದರು.
ನವೆಂಬರ್ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಇದಕ್ಕಾಗಿ ಎಲ್ಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಇತ್ತೀಚೆಗೆ ದಾವೋಸ್, ಅಮೆರಿಕಾ ಹಾಗೂ ಜಪಾನ್‍ಗೆ ಭೇಟಿ ನೀಡಿದ ವೇಳೆ ವಿಶ್ವದ ಮುಂಚೂಣಿಯಲ್ಲಿರುವ ಉದ್ಯಮಿಗಳನ್ನು ಭೇಟಿಯಾಗಿ ರಾಜ್ಯದಲ್ಲಿ ಬಂಡವಾಳ ಹೂಡಲು ಆಹ್ವಾನ ನೀಡಿದ್ದೇವೆ, ಅನೇಕರು ಆಸಕ್ತಿ ತೋರಿದ್ದಾರೆ ಎಂದು ತಿಳಿಸಿದರು.
إرسال تعليق