ಮುಂಜಾವಿನಜಾವ ಐಟಿ ದಿಡೀರ್ ಆಗಮನ ; ಏಕಕಾಲಕ್ಕೆ 22 ಮಣಿಪಾಲ್ ಸಂಸ್ಥೆಗಳ ಮೇಲೆ ದಾಳಿ.

 ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

               ಸಾಂದರ್ಭಿಕ ಚಿತ್ರ

By : Rekha.M
Online Desk

ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ನಾಲ್ಕು ಇನ್ನೋವಾ ವಾಹನದಲ್ಲಿ ಆಗಮಿಸಿರುವ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆಗೆ ಆಗಮಿಸಿದ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

200 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಒಟ್ಟು 22 ಕಡೆಗಳಲ್ಲಿ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಓಲ್ಡ್ ಏರ್‌ ಪೋರ್ಟ್ ರೋಡ್, ಕನ್ನಿಂಗ್ ಹ್ಯಾಮ್ ರೋಡ್, ಯಶವಂತಪುರ, ಏರ್‌ ಪೋರ್ಟ್ ರೋಡ್ ಸೇರಿದಂತೆ 22 ಕಡೆ ದಾಳಿ ನಡೆದಿದೆ.

ಬೆಂಗಳೂರಿನಲ್ಲಿ ಮಣಿಪಾಲ್ ಗ್ರೂಪ್ ಮೇಲೆ ಐಟಿ ದಾಳಿ ಹಿನ್ನೆಲೆ, ಉಡುಪಿ ಜಿಲ್ಲೆ ಮಣಿಪಾಲದಲ್ಲೂ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ. ಮಣಿಪಾಲ ಗ್ರೂಪ್ ನ ಫೈನಾನ್ಸ್ ವಿಭಾಗದಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.







Post a Comment

Previous Post Next Post