ಮೋದಿ 2 ಲಕ್ಷ ರು ಪರಿಹಾರ ಧನ ಘೋಷಣೆ : ಸಿಕಂದರಾಬಾದ್ ಹೋಟೆಲ್ ಗೆ ಅಗ್ನಿ ದುರಂತ : ಸಂತ್ರಸ್ತರಾಗಿ ಮೋದಿ ಸಂತಾಪ

 ತೆಲಂಗಾಣದ ಸಿಕಂದರಾಬಾದ್ ನಲ್ಲಿ ಸಂಭವಿಸಿರುವ ಭೀಕರ ಹೊಟೆಲ್ ಅಗ್ನಿಅವಘಡಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ಥರಿಗೆ ಆರ್ಥಿಕ ಪರಿಹಾರ ಘೋಷಣೆ ಮಾಡಿದ್ದಾರೆ.

                    ಹೊಟೆಲ್ ನಲ್ಲಿ ಬೆಂಕಿ ಅವಘಡ

By : Rekha.M
Online Desk

ನವದೆಹಲಿ: ತೆಲಂಗಾಣದ ಸಿಕಂದರಾಬಾದ್ ನಲ್ಲಿ ಸಂಭವಿಸಿರುವ ಭೀಕರ ಹೊಟೆಲ್ ಅಗ್ನಿಅವಘಡಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ಥರಿಗೆ ಆರ್ಥಿಕ ಪರಿಹಾರ ಘೋಷಣೆ ಮಾಡಿದ್ದಾರೆ.

ಸಿಕಂದರಾಬಾದ್‌ನ ರೂಬಿ ಪ್ರೈಡ್ ಎಂಬ ಐಷಾರಾಮಿ ಹೋಟೆಲ್ ಕಟ್ಟಡದ ನೆಲ ಮಹಡಿಯಲ್ಲಿರುವ ಇ-ಬೈಕ್ ಶೋರೂಮ್‌ನಲ್ಲಿ ಸೋಮವಾರ ರಾತ್ರಿ ಸ್ಫೋಟ ಸಂಭವಿಸಿದ ನಂತರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಈ ವರೆಗೂ 8 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ.

ವಿಚಾರ ತಿಳಿಯುತ್ತಲೇ ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, 'ತೆಲಂಗಾಣದ ಸಿಕಂದರಾಬಾದ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪ್ರಾಣಹಾನಿಯಾಗಿರುವುದು ಬೇಸರ ತಂದಿದೆ. ಮೃತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ ಮತ್ತು ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಅಂತೆಯೇ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ಗಳನ್ನು ಮೃತರ ಸಂಬಂಧಿಕರಿಗೆ ಮತ್ತು ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ತನಿಖೆಗೆ ಆದೇಶ ನೀಡಿದ ತೆಲಂಗಾಣ ಸರ್ಕಾರ
ಇನ್ನು ಘಟನೆಗೆ ಸಂಬಂಧಿಸಿದಂತೆ ತೆಲಂಗಾಣದ ಟಿಆರ್ ಎಸ್ ಸರ್ಕಾರ ತನಿಖೆಗೆ ಆದೇಶ ನೀಡಿದೆ. ಈ ಕುರಿತು ಮಾತನಾಡಿರುವ ತೆಲಂಗಾಣ ಗೃಹ ಸಚಿವ ಮೊಹಮ್ಮದ್ ಮಹಮೂದ್ ಅಲಿ ಅವರು, ಘಟನೆ ತುಂಬಾ ದುರದೃಷ್ಟಕರ. ಅಗ್ನಿಶಾಮಕ ದಳದ ತಂಡಗಳು ಲಾಡ್ಜ್‌ನಿಂದ ಜನರನ್ನು ರಕ್ಷಿಸಲು ಪ್ರಯತ್ನಿಸಿದವು ಆದರೆ ಭಾರೀ ಹೊಗೆಯಿಂದಾಗಿ ಕೆಲವರು ಸಾವನ್ನಪ್ಪಿದ್ದಾರೆ. ಕೆಲವರನ್ನು ಲಾಡ್ಜ್‌ನಿಂದ ರಕ್ಷಿಸಲಾಗಿದೆ. ಘಟನೆ ಹೇಗೆ ಸಂಭವಿಸಿತು ಎಂದು ನಾವು ತನಿಖೆ ನಡೆಸುತ್ತಿದ್ದೇವೆ. ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು.

ಸಿಕಂದರಾಬಾದ್‌ನ ರೂಬಿ ಪ್ರೈಡ್ ಎಂಬ ಐಷಾರಾಮಿ ಹೋಟೆಲ್ ಕಟ್ಟಡದ ನೆಲ ಮಹಡಿಯಲ್ಲಿರುವ ಇ-ಬೈಕ್ ಶೋರೂಮ್‌ನಲ್ಲಿ ಸೋಮವಾರ ರಾತ್ರಿ ಸ್ಫೋಟ ಸಂಭವಿಸಿದ ನಂತರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಈ ವರೆಗೂ 8 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವರು ಸುಟ್ಟಗಾಯಗಳಿಗೆ ಒಳಗಾಗಿದ್ದಾರೆ. ಅಪಘಾತದ ಸಮಯದಲ್ಲಿ, ಪಾಸ್‌ಪೋರ್ಟ್ ಕಚೇರಿಗೆ ಸಮೀಪವಿರುವ ಈ ಹೋಟೆಲ್‌ನಲ್ಲಿ 25 ಮಂದಿ ಇದ್ದರು ಎಂದು ಹೇಳಲಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಮೂಲಗಳ ಪ್ರಕಾರ ರೂಬಿ ಮೋಟಾರ್ಸ್ ಶೋರೂಂನಲ್ಲಿ ಇರಿಸಲಾಗಿದ್ದ ಇ-ಬೈಕ್  ಬ್ಯಾಟರಿ ಅಥವಾ ಜನರೇಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿರುವ ಶಂಕೆ ಇದೆ ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿದ್ದಾರೆ.





Post a Comment

أحدث أقدم