ಡಿಸೆಂಬರ್ 31ರೊಳಗೆ ಬಿಬಿಎಂಪಿ ಚುನಾವಣೆ ನಡೆಸಿ: ಹೈಕೋರ್ಟ್ ಆದೇಶ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಡಿಸೆಂಬರ್ 31ರೊಳಗೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ.
               ಬಿಬಿಎಂಪಿ
By : Rekha.M
Online Desk

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಡಿಸೆಂಬರ್ 31ರೊಳಗೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ.

ಅದಕ್ಕೂ ಮೊದಲು ಸರ್ಕಾರ ಒಬಿಸಿ ಆಯೋಗಕ್ಕೆ ಅಂಕಿಅಂಶಗಳನ್ನು ನೀಡಬೇಕಾಗಿದ್ದು ಅದು ನವೆಂಬರ್ 30ರೊಳಗೆ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಿದೆ. ನ.30 ರೊಳಗೆ ಮೀಸಲಾತಿಯನ್ನು ಪ್ರಕಟಿ ಡಿ.31 ರೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ಆದೇಶವನ್ನು ಮಾಡಿದೆ.

ಬಿಬಿಎಂಪಿಯಲ್ಲಿ ಸದಸ್ಯರುಗಳಿಲ್ಲದೇ ಎರಡು ವರ್ಷಗಳೇ ಕಳೆದುಹೋಗಿದೆ. ಆದರೆ ಸರ್ಕಾರ ಬೇರೆ ಬೇರೆ ಕಾರಣಗಳನ್ನು ನೀಡುತ್ತ ಚುನಾವಣೆಯನ್ನು ಮುಂದೂಡಿಕೆ ಮಾಡಲು ತಂತ್ರಗಳನ್ನು ಹೆಣೆಯುತ್ತಲೇ ಇದೆ. ಶೀಘ್ರ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಹಿಂದೇಟು ಹಾಕುತ್ತಿದೆ. ಒಬಿಸಿ ಸೇರಿಸಿ ಹೊಸ ಮೀಸಲಾತಿ ಪಟ್ಟಿಗೆ ಕಾಲಾವಕಾಶ ನೀಡುವಂತೆ ಸರ್ಕಾರ ಕೋರಿಕೆಯನ್ನು ಸಲ್ಲಿಸಿತ್ತು. ಹೊಸ ಮೀಸಲಾತಿ ಪಟ್ಟಿ ಪ್ರಕಟಕ್ಕೆ 16 ವಾರಗಳ ಕಾಲಾವಕಾಶ ಕೋರಿತ್ತು. 



Post a Comment

أحدث أقدم