ಗೋವಾದಲ್ಲಿ ಇತ್ತೀಚಿಗೆ ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಪಕ್ಷದ 8 ಶಾಸಕರಿಗೆ ತಲಾ ರೂ. 40-50 ಕೋಟಿ ಆಮಿಷವೊಡ್ಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಪಣಜಿ: ಗೋವಾದಲ್ಲಿ ಇತ್ತೀಚಿಗೆ ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಪಕ್ಷದ 8 ಶಾಸಕರಿಗೆ ತಲಾ ರೂ. 40-50 ಕೋಟಿ ಆಮಿಷವೊಡ್ಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕರಾವಳಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪಣಜಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್, ಈ ಆರೋಪ ಮಾಡಿದರು.
ಕಾಂಗ್ರೆಸ್ ತೊರೆಯಲು ಪ್ರತಿಯೊಬ್ಬ ಶಾಸಕರಿಗೆ 40-50 ಕೋಟಿ ರೂಪಾಯಿಗಳನ್ನು ನೀಡಲಾಗಿದೆ ಅಥವಾ ಬಹುಶಃ ಅವರಿಗೆ ಕೇಂದ್ರೀಯ ಸಂಸ್ಥೆಗಳ ಭಯ ಇರಬೇಕು. ಬಿಜೆಪಿ ಎಲ್ಲೆಡೆ ಇಂತಹ ಕೆಲಸ ಮಾಡುತ್ತಿದೆ. ಇಷ್ಟೆಲ್ಲಾ ಹಣ ಅವರಿಗೆ ಎಲ್ಲಿಂದ ಬರುತ್ತಿದೆ. ಅಧಿಕಾರವನ್ನು ಅವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ, ಚುನಾಯಿತ ಪ್ರತಿನಿಧಿಗಳನ್ನು ವಿಭಜಿಸುತ್ತಿದ್ದಾರೆ ಎಂದು ರಾವ್ ಆರೋಪಿಸಿದರು.
ಆದಾಗ್ಯೂ, ಈ ಆರೋಪಗಳನ್ನು ತಳ್ಳಿ ಹಾಕಿರುವ ಬಿಜೆಪಿ, ಎಂಟು ಕಾಂಗ್ರೆಸ್ ಶಾಸಕರು ಆಡಳಿತ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಹಣದ ಲಾಭಕ್ಕಾಗಿ ಅಲ್ಲ, ಅಭಿವೃದ್ಧಿ ಕಾರ್ಯಸೂಚಿಯಿಂದ ಪ್ರಭಾವಿತರಾಗಿ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಹೇಳಿದೆ.
ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಸೇರಿದಂತೆ ಎಂಟು ಕಾಂಗ್ರೆಸ್ ಶಾಸಕರು ಬುಧವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದು, 40 ಸದಸ್ಯ ಬಲದ ವಿಧಾನಸಭೆಯಲ್ಲಿ ಈಗ ಕೇವಲ ಮೂರು ಶಾಸಕರನ್ನು ಕಾಂಗ್ರೆಸ್ ಹೊಂದಿದೆ.
Post a Comment