ಎನ್ ಐಎ ದಾಳಿ ಬೆನ್ನಲ್ಲೇ 5 ವರ್ಷ ದೇಶಾದ್ಯಂತ ಪಿಎಫ್ ಐ ಸಂಘಟನೆ ಬ್ಯಾನ್: ಕೇಂದ್ರ ಸರ್ಕಾರದ ಮಹತ್ವದ ಆದೇಶ

 ದೇಶವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ದೇಶದಾದ್ಯಂತ ಐದು ವರ್ಷಗಳ ಕಾಲ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್’ಐ) ಸಂಘಟನೆಯನ್ನು ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

               ಪಿಎಫ್ ಐ ಲೋಗೋ

By : Rekha.M
Online Desk

ನವದೆಹಲಿ: ದೇಶವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ದೇಶದಾದ್ಯಂತ ಐದು ವರ್ಷಗಳ ಕಾಲ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್’ಐ) ಸಂಘಟನೆಯನ್ನು ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಕೇಂದ್ರ ಗೃಹ ಇಲಾಖೆ ಈ ಕುರಿತಂತೆ ಆದೇಶ ಹೊರಡಿಸಿದ್ದು, ಎನ್’ಐಎ ದಾಳಿಯ ಬೆನ್ನಲ್ಲೇ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತತಕ್ಷಣದಿಂದಲೇ ಜಾರಿಗೆ ಬರುವಂತೆ ದೇಶದಾದ್ಯಂತ ಐದು ವರ್ಷಗಳ ಕಾಲ ನಿಷೇಧಿಸಲಾಗಿದ್ದು, ಇದು ಕಾನೂನು ಬಾಹಿರ ಸಂಘಟನೆ ಎಂದು ಘೋಷಣೆ ಮಾಡಿದೆ.

ಪಿಎಫ್​ಐ ನಿಷೇಧಕ್ಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಅಧಿಸೂಚನೆಯಲ್ಲಿ ನೀಡಿರುವ ವಿವರಣೆಯಲ್ಲಿ ಕರ್ನಾಟಕ ಸರ್ಕಾರದ ಶಿಫಾರಸು ಹಾಗೂ ಪ್ರವೀಣ್ ನೆಟ್ಟಾರು ಕೊಲೆಯನ್ನು ಉಲ್ಲೇಖಿಸಲಾಗಿದೆ. ಪಿಎಫ್​ಐ ನಿಷೇಧಕ್ಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಅಧಿಸೂಚನೆಯಲ್ಲಿ ನೀಡಿರುವ ವಿವರಣೆಯಲ್ಲಿ ಕರ್ನಾಟಕ ಸರ್ಕಾರದ ಶಿಫಾರಸನ್ನೂ ಉಲ್ಲೇಖಿಸಿದೆ.

ಪಿಎಫ್ ಐ ಜೊತೆಗಿದ್ದ ನ್ಯಾಷನಲ್ ಕಾನ್ಫೆಡರೇಷನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಷನ್, ನ್ಯಾಷನಲ್ ವುಮೆನ್ಸ್ ಫ್ರಂಟ್ ಕೂಡ ಕಾನೂನುಬಾಹಿರ ಸಂಸ್ಥೆ, ಜ್ಯೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಷನ್ ಬ್ಯಾನ್, ರಿಹಾಬ್ ಫೌಂಡೇಷನ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ಬ್ಯಾನ್ ಮಾಡಲಾಗಿದೆ.



Post a Comment

Previous Post Next Post