ಮುರುಘಾ ಶ್ರೀಗಳ ಬಂಧನ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ: ಕಂದಾಯ ಸಚಿವ ಆರ್ ಅಶೋಕ್

 ಮುರುಘಾ ಶ್ರೀಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠಗಳ ಬಗ್ಗೆ ಸರ್ಕಾರಕ್ಕೆ ಗೌರವವಿದೆ. ಮಠಗಳಲ್ಲಿ ಈ ರೀತಿ ಆಗಬಾರದು. ಕಾನೂನು ಪ್ರಕಾರ ಪೊಲೀಸರು ಕೆಲಸ ಮಾಡುತ್ತಾರೆ. ಕಾನೂನಿನಿಂದ ಏನು ಕ್ರಮ ಕೈಗೊಳ್ಳಬೇಕು ಕೈಗೊಳ್ಳಲಾಗುತ್ತದೆ. ಇದರಲ್ಲಿ ಸರ್ಕಾರ ಮಧ್ಯೆ ಪ್ರವೇಶಿಸುವುದಿಲ್ಲ ಎಂದಿದ್ದಾರೆ. 

                            ಆರ್ ಅಶೋಕ್

By : Rekha.M

Online Desk

ಬೆಂಗಳೂರು: ಮುರುಘಾ ಶ್ರೀಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠಗಳ ಬಗ್ಗೆ ಸರ್ಕಾರಕ್ಕೆ ಗೌರವವಿದೆ. ಮಠಗಳಲ್ಲಿ ಈ ರೀತಿ ಆಗಬಾರದು. ಕಾನೂನು ಪ್ರಕಾರ ಪೊಲೀಸರು ಕೆಲಸ ಮಾಡುತ್ತಾರೆ. ಕಾನೂನಿನಿಂದ ಏನು ಕ್ರಮ ಕೈಗೊಳ್ಳಬೇಕು ಕೈಗೊಳ್ಳಲಾಗುತ್ತದೆ. ಇದರಲ್ಲಿ ಸರ್ಕಾರ ಮಧ್ಯೆ ಪ್ರವೇಶಿಸುವುದಿಲ್ಲ ಎಂದಿದ್ದಾರೆ. 

ಕಾನೂನು ತನ್ನದೇ ಆದ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದೆ. ಈ ನೆಲದ ಕಾನೂನು ಏನಿದೆಯೋ ಅದನ್ನು ಸರ್ಕಾರ ಪಾಲನೆ ಮಾಡಲಿದೆ. ಪೊಲೀಸರು ಕಾನೂನಿನ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು. 

ಇದೇ ವೇಳೆ ಪ್ರಧಾನಿ ಭೇಟಿ ಕುರಿತು ಪ್ರತಿಕ್ರಿಯಿಸಿದ ಸಚಿವರು, ಪ್ರಧಾನಿ ಮೋದಿ ಮಂಗಳೂರಿಗೆ ಬರುತ್ತಾರೆ. ಸರ್ಕಾರಿ ಕಾರ್ಯಕ್ರಮ ಉದ್ಘಾಟನೆ ಮಾಡುತ್ತಾರೆ. ನಾನು, ಸಿಎಂ, ಯಡಿಯೂರಪ್ಪ ಅವರು ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಹೋಗುತ್ತಿದ್ದೇವೆ. ಕರ್ನಾಟಕದಲ್ಲಿ ಹೊಸ ಹೊಸ ಯೋಜನೆಗಳು ಬರುತ್ತಿವೆ. ಪ್ರಧಾನ ಮಂತ್ರಿಗಳು ಬರ್ತಿರೋದು ಖುಷಿ ವಿಚಾರ. ಅವರ ಜೊತೆ ಕರ್ನಾಟಕ ರಾಜಕೀಯ ಬೆಳವಣಿಗೆ, ಮುಂದಿನ ಯೋಜನೆಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಯು.ಪಿ ಸಿಎಂ ಯೋಗಿ ಆದಿತ್ಯನಾಥ್ ಕೂಡ ಬಂದಿದ್ದಾರೆ. ಚುನಾವಣೆಯ ಹೊಸ್ತಿಲಿನಲ್ಲಿ ಅವರು ಬಂದಿರೋದು ಪಕ್ಷಕ್ಕೆ ಬಹಳ ಒಳ್ಳೆಯದಾಗಿದೆ ಎಂದರು. 


    Post a Comment

    أحدث أقدم