ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಸೋಮವಾರ ರಾತ್ರಿಯೂ ಮುಂದುವರೆದಿದ್ದು, ಉದ್ಯಾನನಗರಿ ಅಕ್ಷರಶಃ ನಲುಗಿ ಹೋಗಿದ್ದು, ಬಹುತೇಕ ಪ್ರದೇಶಗಳು ಜಲಾವೃತವಾಗಿವೆ
ನದಿಯಂತಾದ ರಸ್ತೆಗಳು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಸೋಮವಾರ ರಾತ್ರಿಯೂ ಮುಂದುವರೆದಿದ್ದು, ಉದ್ಯಾನನಗರಿ ಅಕ್ಷರಶಃ ನಲುಗಿ ಹೋಗಿದ್ದು, ಬಹುತೇಕ ಪ್ರದೇಶಗಳು ಜಲಾವೃತವಾಗಿವೆ.
ಮಳೆಯ ಆರ್ಭಟಕ್ಕೆ ರಾಜಧಾನಿಯ ಜನ ಅದರಲ್ಲೂ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಐಟಿ ಕಂಪನಿಗಳು ಸೇರಿದಂತೆ ಇತರ ರಂಗಗಳ ನಾನಾ ಕಂಪನಿಗಳು ಇರುವ ಬೆಳ್ಳಂದೂರು ಸುತ್ತಮುತ್ತಲಿನ ಪ್ರದೇಶ ತತ್ತರಿಸಿ ಹೋಗಿದ್ದು, ಇಲ್ಲಿನ ನಿವಾಸಿಗಳು ಹಿಂದೆ ಕಂಡು ಕೇಳರಿಯದ ಮಳೆ, ಅದು ಉಂಟು ಮಾಡುತ್ತಿರುವ ದುಸ್ಥಿತಿಗೆ ಹೆದರಿದ್ದಾರೆ.
ಇಂದು ಸಂಜೆ 6 ಗಂಟೆಯಿಂದಲೂ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಬೆಂಗಳೂರಿನ ಹಲವು ಬಡಾವಣೆಗಳು ಮಳೆ ನೀರಿನಿಂದ ಜಲಾವೃತಗೊಂಡಿದ್ದರೆ, ಹಲಸೂರು, ಜೀವನ್ ಭೀಮಾ ನಗರ, ಶಿವಾಜಿನಗರ, ಎಂ.ಜಿ. ರಸ್ತೆ, ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶದ ರಸ್ತೆಗಳು ಹೊಳೆಯಂತಾಗಿದ್ದವು.
Post a Comment