ಅಸಭ್ಯ ವರ್ತನೆಯಿಂದ ಉಪನ್ಯಾಸಕನ ವಜಾ : ಹತಾಶೆಗೊಂಡು ಮಹಿಳಾ ಪ್ರಾಂಶುಪಾಲರಿಗೆ ಬೆದರಿಕೆ ಹಾಕಿದ ಉಪನ್ಯಾಸಕ

 ಮಹಿಳಾ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಕೆಲಸದಿಂದ ವಜಾಗೊಳಿಸಿದ ನಂತರ ಹತಾಶೆಗೊಂಡ 36 ವರ್ಷದ ಕಾಲೇಜು ಉಪನ್ಯಾಸಕರೊಬ್ಬರು, ಕಾಲೇಜು ಪ್ರಾಂಶುಪಾಲರಿಗೆ ವಿವಿಧ ದೂರವಾಣಿ ಸಂಖ್ಯೆಗಳಿಂದ ಕರೆ ಮಾಡಿ ಬೆದರಿಕೆ ಮತ್ತು ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

                          ಪ್ರಾತಿನಿಧಿಕ ಚಿತ್ರ

By : Rekha.M
Online Desk

ಬೆಂಗಳೂರು: ಮಹಿಳಾ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಕೆಲಸದಿಂದ ವಜಾಗೊಳಿಸಿದ ನಂತರ ಹತಾಶೆಗೊಂಡ 36 ವರ್ಷದ ಕಾಲೇಜು ಉಪನ್ಯಾಸಕರೊಬ್ಬರು, ಕಾಲೇಜು ಪ್ರಾಂಶುಪಾಲರಿಗೆ ವಿವಿಧ ದೂರವಾಣಿ ಸಂಖ್ಯೆಗಳಿಂದ ಕರೆ ಮಾಡಿ ಬೆದರಿಕೆ ಮತ್ತು ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಶಂಕಿತ ವ್ಯಕ್ತಿಯು ಸಾಮಾಜಿಕ ಮಾಧ್ಯಮದಲ್ಲಿ ಕಾಲೇಜಿನ ಬಗ್ಗೆ ಅವಹೇಳನಕಾರಿ ಪೋಸ್ಟ್‌ಗಳು ಮತ್ತು ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಕಾಲೇಜಿನ ನಿಯಮಗಳು ಮತ್ತು ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ, ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ಭೌತಶಾಸ್ತ್ರ ಉಪನ್ಯಾಸಕ ಎಸ್.ಮೋಹನ್ ಕುಮಾರ್ ಅವರನ್ನು ಕಾಲೇಜು ಆಡಳಿತ ಮಂಡಳಿ ಕಳೆದ ಫೆಬ್ರವರಿಯಲ್ಲಿ ಕೆಲಸದಿಂದ ತೆಗೆದುಹಾಕಿತ್ತು.

ಕಿರುಕುಳವನ್ನು ತಡೆಯಲು ಪೊಲೀಸರು ಮಧ್ಯಸ್ಥಿಕೆಗೆ ಪ್ರಾಂಶುಪಾಲರು ಕುಮಾರ್ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರತಿಷ್ಠಿತ ಟ್ರಸ್ಟ್‌ನಿಂದ ನಡೆಸಲ್ಪಡುವ ಮತ್ತು ಕನಕಪುರ ರಸ್ತೆಯ ಸೋಮನಹಳ್ಳಿಯಲ್ಲಿರುವ ಖಾಸಗಿ ಕಾಲೇಜು, ಬೆಂಗಳೂರು ಮತ್ತು ಸುತ್ತಮುತ್ತ ಅನೇಕ ಶಾಖೆಗಳನ್ನು ಹೊಂದಿದೆ. ದೂರು ದಾಖಲಿಸಿರುವುದನ್ನು ಒಪ್ಪಿಕೊಂಡರೂ ಪ್ರಾಂಶುಪಾಲರು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

    ಮೋಹನ್ ಕುಮಾರ್ ಅವರು 40 ವರ್ಷ ವಯಸ್ಸಿನ ಪ್ರಾಂಶುಪಾಲರಿಗೆ ಕಳೆದ ಆರು ತಿಂಗಳಿಂದ ತೊಂದರೆ ನೀಡುತ್ತಿದ್ದರು ಎಂದು ವರದಿಯಾಗಿದೆ. ರಾತ್ರಿ ವೇಳೆ ಮಹಿಳಾ ಪ್ರಾಂಶುಪಾಲರಿಗೆ ಕರೆ ಮಾಡಿ ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಘೋರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾಗಿ ಆರೋಪಿಸಲಾಗಿದೆ. ಈ ವಿಷಯವನ್ನು ಆಡಳಿತ ಮಂಡಳಿಯ ಗಮನಕ್ಕೆ ತಂದ ನಂತರ ಅವರ ವಿರುದ್ಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

    'ಶನಿವಾರ ದೂರು ದಾಖಲಾಗಿದೆ. ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿದೆ. ಸದ್ಯದಲ್ಲೇ ಉಪನ್ಯಾಸಕರನ್ನು ಬಂಧಿಸುತ್ತೇವೆ. ದೂರುದಾರರು ಆಕೆಗೆ ಬೇರೆ ಬೇರೆ ನಂಬರ್‌ಗಳಿಂದ ಕರೆ ಮಾಡಿ ನಿಂದಿಸುವುದಾಗಿ ದೂರಿನಲ್ಲಿದೆ ಎಂದು ತನಿಖೆಯ ಭಾಗವಾಗಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಆರೋಪಿ ವಿರುದ್ಧ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ದೂರುದಾರರನ್ನು ಸಂಪರ್ಕಿಸಿದಾಗ, ಪ್ರತಿಕ್ರಿಯಿಸಲು ನಿರಾಕರಿಸಿದರು. ಕಾಲೇಜಿನ ಅಧ್ಯಕ್ಷರು ಮತ್ತು ಕಾರ್ಯದರ್ಶಿಯ ಅನುಮತಿಯಿಲ್ಲದೆ ಮಾತನಾಡಲು ಅವರಿಗೆ ಅಧಿಕಾರವಿಲ್ಲ ಎಂದು ಹೇಳಿದರು. ಸದ್ಯ ತನಿಖೆ ನಡೆಯುತ್ತಿದೆ.




    Post a Comment

    أحدث أقدم