ನೀಟ್ ಪರೀಕ್ಷೆ ಫಲಿತಾಂಶ ಇಂದು ಪ್ರಕಟ

 

ಬೆಂಗಳೂರು: ಬುಧವಾರ ಬಹುನಿರೀಕ್ಷಿತ ರಾಷ್ಟ್ರೀಯ ಅರ್ಹತಾ & ಪ್ರವೇಶ ಪರೀಕ್ಷೆ ಫಲಿತಾಂಶ ಹೊರ ಬೀಳಲಿದೆ.

ಜುಲೈ 17ರಂದು ದೇಶದ 546 ನಗರಗಳಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ನಡೆದಿದ್ದ ನೀಟ್ ಪರೀಕ್ಷೆ ಫಲಿತಾಂಶ ಹೊರ ಬೀಳಲಿದೆ. ಈ ವರ್ಷ ಒಟ್ಟು 18 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ತಮ್ಮ ಹೆಸರನ್ನು ನೋಂದಾಯಿಸಿ ಕೊಂಡಿದ್ದರು.

 

ತಾಂತ್ರಿಕ ದೋಷಗಳಿಂದ ಜುಲೈ 17ರಂದು ನಡೆದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿ ಗಳಿಗೆ ಸೆ.4ರಂದು ನೀಟ್ ಮರು ಪರೀಕ್ಷೆ ನಡೆಸಲಾಗಿತ್ತು. ಈ ವರ್ಷ 18,72,343 ಅಭ್ಯರ್ಥಿಗಳು NEET UG ಪರೀಕ್ಷೆಗೆ ಹಾಜರಾಗಿ ದ್ದರು.



Post a Comment

أحدث أقدم