ಪಾಲಿಕೆ ಅಧಿಕಾರಿಗಳ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತಾರತಮ್ಯ ಮಾಡುತ್ತಿರುವ ಹಿನ್ನೆಲೆ ಕೆಲವೆಡೆ ಜನಾಕ್ರೋಶ ವ್ಯಕ್ತವಾಗಿದೆ. ಮತ್ತೊಂದೆಡೆ ನಲಪಾಡ್ ಅಕಾಡೆಮಿ ಒತ್ತುವರಿ ತೆರವಿಗೆ ಹೈಕೋರ್ಟ್ ತಡೆ ನೀಡಿದೆ.
ಬೆಂಗಳೂರು: ಪಾಲಿಕೆ ಅಧಿಕಾರಿಗಳ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತಾರತಮ್ಯ ಮಾಡುತ್ತಿರುವ ಹಿನ್ನೆಲೆ ಕೆಲವೆಡೆ ಜನಾಕ್ರೋಶ ವ್ಯಕ್ತವಾಗಿದೆ. ಮತ್ತೊಂದೆಡೆ ನಲಪಾಡ್ ಅಕಾಡೆಮಿ ಒತ್ತುವರಿ ತೆರವಿಗೆ ಹೈಕೋರ್ಟ್ ತಡೆ ನೀಡಿದೆ.
ಶಾಸಕ ಎನ್.ಎ.ಹ್ಯಾರಿಸ್ ಒಡೆತನದ ಚಲಘಟ್ಟದ ಸರ್ವೇ ನಂಬರ್ 70/14ರಲ್ಲಿರುವ ನಲಪಾಡ್ ಅಕಾಡೆಮಿಯ ಒತ್ತುವರಿ ತೆರವು ಕಾರ್ಯ ಸ್ಥಗಿತಗೊಂಡಿದೆ. ಮೊದಲ ದಿನ 50ಮೀಟರ್ ಒತ್ತುವರಿ ತೆರವು ಮಾಡಲಾಗಿತ್ತು, ಬುಧವಾರ ಎರಡನೇ ದಿನವು ಬಿಬಿಎಂಪಿ ಕಾರ್ಯಾಚರಣೆ ನಡಸಿತ್ತು.
ಇದನ್ನು ಆಕ್ಷೇಪಿಸಿ ನಲಪಾಡ್ ಅಕಾಡೆಮಿ ಶಿಕ್ಷಣ ಸಂಸ್ಥೆಯು ಹೈಕೋರ್ಟ್ ಮೆಟ್ಟಿಲೇರಿತ್ತು. ಇದನ್ನು ವಿಚಾರಣೆ ನಡೆಸಿ ಹೈಕೋರ್ಟ್ ನ್ಯಾಯಪೀಠ ಸೆಪ್ಟಂಬರ್ 16ರವರೆಗೆ ಅಕಾಡೆಮಿಯ ಒತ್ತುವರಿ ತೆರವಿಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಜೊತೆಗೆ ಜಂಟಿ ಸಮೀಕ್ಷೆ ನಡೆಸುವಂತೆ ಸೂಚಿಸಿದೆ.
ಬಾಕಿ ಉಳಿದಿದ್ದ 40ಮೀಟರ್ ಒತ್ತುವರಿಯನ್ನು ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಶುಕ್ರವಾರ ಯೋಜನೆ ಹಾಕಿಕೊಂಡಿದ್ದರು. ಅಷ್ಟರಲ್ಲಿ ಮಧ್ಯಂತರ ಆದೇಶ ಹಿನ್ನೆಲೆ ನಲಪಾಡ್ ಅಕಾಡೆಮಿ ಒತ್ತುವರಿ ತೆರವಿಗೆ ಮುಂದಾಗಲಿಲ್ಲ ಎನ್ನಲಾಗಿದೆ. ಸದ್ಯಕ್ಕೆ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಗಿತಗೊಂಡಿದೆ, ಉನ್ನತ ಅಧಿಕಾರಿಗಳಿಂದ ನಿರ್ದೇಶನ ಬಂದ ನಂತರ ನಾವು ಮತ್ತೆ ತೆರವು ಕಾರ್ಯಾಚರಣೆ ಆರಂಭಿಸುವುದಾಗಿ ಬೆಳ್ಳಂದೂರು ವಾರ್ಡ್ ನ ಅಸಿಸ್ಟೆಂಟ್ ಎಂಜಿನೀಯರ್ ಶ್ರೀನಿವಾಸಲು ತಿಳಿಸಿದ್ದಾರೆ.
Post a Comment