ಕೋವಿಡ್ - ೧೯ ಹೊಸ ಪ್ರಕರಣ ಪತ್ತೆ : ಕಳೆದ ೨೪ ಗಂಟೆಗಳಲ್ಲಿ ೪೩೬೯ ಹೊಸ ಪ್ರಕರಣ , ಕೇರಳದ ೭ ಮಂದಿ ಸೇರಿದಂತೆ ೨೦ ಜನರ ದುರ್ಮರಣ

 ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 4,369 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,04,949ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

                     ಪ್ರಾತಿನಿಧಿಕ ಚಿತ್ರ

By : Rekha.M
Online Desk

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 4,369 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,04,949ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳದಲ್ಲಿ 7 ಸೇರಿದಂತೆ 20 ಜನರು ಸಾವಿಗೀಡಾಗಿದ್ದು, ಈವರೆಗೆ ಒಟ್ಟು 5,28,185 ಜನರು ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,28,185 ಕ್ಕೆ ಇಳಿಕೆಯಾಗಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.10ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.




Post a Comment

Previous Post Next Post