ಗುಂಡಿನ ದಾಳಿ , ಒಬ್ಬ ವ್ಯಕ್ತಿಯ ಸಾವು , ೧೧ ಜನರಿಗೆ ಗಂಭೀರ ಗಾಯ : ಬಿಹಾರದ ಬೇಗಸರಾಯ್ ನಲ್ಲಿ ದುಷ್ಕರ್ಮಿಗಳಿಂದ ಹಲ್ಲೆ ನಡೆದ ಘಟನೆ

 ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸ್ಕೂಟರ್ ನಲ್ಲಿ ಬಂದ ಇಬ್ಬರು ಬಂದೂಕುಧಾರಿಗಳು ಜನನಿಬಿಡ ಪ್ರದೇಶಗಳಲ್ಲಿ ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

By : Rekha.M
Online Desk

ಬೇಗುಸರಾಯ್: ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸ್ಕೂಟರ್ ನಲ್ಲಿ ಬಂದ ಇಬ್ಬರು ಬಂದೂಕುಧಾರಿಗಳು ಜನನಿಬಿಡ ಪ್ರದೇಶಗಳಲ್ಲಿ ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂದೂಕುಧಾರಿಗಳನ್ನು ಇನ್ನೂ ಗುರುತಿಸಬೇಕಾಗಿದೆ ಎಂದು ಅವರು ಹೇಳಿದರು.

ಸಂಜೆ 5 ಗಂಟೆ ಸುಮಾರಿಗೆ, ಮೋಟಾರ್ ಸೈಕಲ್ ನಲ್ಲಿ ಮಲ್ಹಿಪುರ್ ಚೌಕ್‌ಗೆ  ಬಂದ ಬಂದೂಕುಧಾರಿಗಳು ಜನನಿಬಿಡ ಪ್ರದೇಶದಲ್ಲಿನ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಏನಾಯಿತು ಎಂದು ತಿಳಿಯುವಲ್ಲಿ ಭಯಭೀತರಾದ ಜನರು ಪ್ರಾಣಕ್ಕಾಗಿ ಓಡಲು ಪ್ರಾರಂಭಿಸಿದರು, ಅಂಗಡಿಯವರು ತಮ್ಮ ಅಂಗಡಿಗಳನ್ನು ತೆರೆದು ಓಡಿಹೋದರು. ನಂತರ ಬಂದೂಕುಧಾರಿಗಳು ಬರೌನಿ ಥರ್ಮಲ್ ಚೌಕ್, ಬರೌನಿ, ತೆಘ್ರಾ, ಬಚ್ವಾರಾ ಮತ್ತು ರಾಜೇಂದ್ರ ಸೇತುವೆಗೆ ತೆರಳಿ ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಚಂದನ್ ಕುಮಾರ್ ಎಂಬ 30 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಯೋಗೇಂದ್ರ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರನ್ನು ಬೇಗುಸರಾಯ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರನ್ನು ಉತ್ತಮ ಚಿಕಿತ್ಸೆಗಾಗಿ ಪಾಟ್ನಾಗೆ ಕಳುಹಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಘಟನೆಯ ನಂತರ ಎಲ್ಲಾ ಪ್ರವೇಶ ಕೇಂದ್ರಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ ಎಂದು ಅವರು ಹೇಳಿದರು.



Post a Comment

أحدث أقدم