ಅಹಮದಾಬಾದ್‌ನಲ್ಲಿರುವ ತಮ್ಮ ಪಕ್ಷದ ಕಚೇರಿ ಮೇಲೆ ಪೊಲೀಸರು ನಡೆಸಿದ "ಅಕ್ರಮ" ದಾಳಿಯ ಬಗ್ಗೆ ನನ್ನ ಬಳಿ ಸಾಕ್ಷ್ಯ ಇದೆ ಮತ್ತು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಶೋಧದ ಬಗ್ಗೆ ನನ್ನ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು...
ಆಮ್ ಆದ್ಮಿ ಪಕ್ಷ ನಾಯಕ ಹಾಗೂ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್
ನವದೆಹಲಿ: ಅಹಮದಾಬಾದ್‌ನಲ್ಲಿರುವ ತಮ್ಮ ಪಕ್ಷದ ಕಚೇರಿ ಮೇಲೆ ಪೊಲೀಸರು ನಡೆಸಿದ "ಅಕ್ರಮ" ದಾಳಿಯ ಬಗ್ಗೆ ನನ್ನ ಬಳಿ ಸಾಕ್ಷ್ಯ ಇದೆ ಮತ್ತು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಶೋಧದ ಬಗ್ಗೆ ನನ್ನ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧರಿದ್ದರೆ ಸಾಕ್ಷ್ಯಗಳನ್ನು ಬಹಿರಂಗಪಡಿಸುತ್ತೇನೆ ಎಎಪಿ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಅವರು ಸೋಮವಾರ ಹೇಳಿದ್ದಾರೆ.
ಭಾನುವಾರ ಸಂಜೆ ಅಹಮದಾಬಾದ್‌ನಲ್ಲಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷದ ಕಚೇರಿಯ ಮೇಲೆ ಯಾವುದೇ ದಾಳಿ ನಡೆಸಿಲ್ಲ ಎಂದು ಗುಜರಾತ್ ಪೊಲೀಸರು ಹೇಳಿದ ನಂತರ ಆಮ್ ಆದ್ಮಿ ಪಕ್ಷ ದಾಳಿ ನಡೆದಿದೆ ಎಂದು ಹೇಳಿದೆ.
ಇಂದು ಎಎಪಿ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಭಾರದ್ವಾಜ್ ಅವರು, "ಅಹಮದಾಬಾದ್‌ನಲ್ಲಿರುವ ಪಕ್ಷದ ಕಚೇರಿಯ ಮೇಲೆ ನಿನ್ನೆ ಪೊಲೀಸರು ಅಕ್ರಮವಾಗಿ ದಾಳಿ ನಡೆಸಿದ್ದಾರೆ. ಅವರು ಯಾವುದೇ ವಾರಂಟ್ ಅಥವಾ ನ್ಯಾಯಾಲಯದ ಆದೇಶವಿಲ್ಲದೆ ಬಲವಂತವಾಗಿ ಕಚೇರಿಗೆ ಪ್ರವೇಶಿಸಿ ಎರಡು ಗಂಟೆಗಳ ಕಾಲ ಶೋಧ ನಡೆಸಿದರು" ಎಂದು ಆರೋಪಿಸಿದ್ದಾರೆ.
ಪೊಲೀಸ್ ತಂಡವು ಎಲ್ಲಾ ಕಂಪ್ಯೂಟರ್‌ಗಳನ್ನು ಪರಿಶೀಲಿಸಿತು, ಪಕ್ಷದ ಕಚೇರಿಯಲ್ಲಿ ಇರಿಸಲಾದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿತು ಮತ್ತು ಅಲ್ಲಿದ್ದ ಜನರನ್ನು ವಿಚಾರಣೆ ನಡೆಸಿತು ಎಂದು ಅವರು ಹೇಳಿದ್ದಾರೆ.
ಆದರೆ ಪಕ್ಷದ ಕಚೇರಿಯಲ್ಲಿ ನಡೆಸಿದ "ಅಕ್ರಮ" ಶೋಧದ ಸಮಯದಲ್ಲಿ ಎಎಪಿ ವಿರುದ್ಧ ಅವರಿಗೆ ಏನನ್ನೂ ಪತ್ತೆಯಾಗದ ಕಾರಣ ಅಹಮದಾಬಾದ್ ಪೊಲೀಸರು ಈಗ ಅದನ್ನು ನಿರಾಕರಿಸುತ್ತಿದ್ದಾರೆ ಎಂದು ಭಾರದ್ವಾಜ್ ದೂರಿದ್ದಾರೆ.
إرسال تعليق