ಮುರುಘಾ ಶ್ರೀಗಳ ಬಂಧನ ಪ್ರಕರಣದಲ್ಲಿ ಕಾನೂನು ಪ್ರಕಾರ ಎಲ್ಲಾ ನಡೆಯುತ್ತದೆ, ಈ ಸಂದರ್ಭದಲ್ಲಿ ಮಾತನಾಡುವುದು ಸರಿಯಲ್ಲ: ಸಿಎಂ ಬಸವರಾಜ ಬೊಮ್ಮಾಯಿ

 ಮುರುಘಾ ಶ್ರೀಗಳ ಬಂಧನ ವಿಚಾರವಾಗಿ ಈ ಸಂದರ್ಭದಲ್ಲಿ ಮಾತನಾಡುವುದು, ಉತ್ತರ ಕೊಡುವುದು ಸರಿಯಲ್ಲ, ಕಾನೂನು ಪ್ರಕಾರವಾಗಿ ಎಲ್ಲಾ ನಡೆಯುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ

By : Rekha.M
Online Desk

ಮಂಗಳೂರು: ಮುರುಘಾ ಶ್ರೀಗಳ ಬಂಧನ ವಿಚಾರವಾಗಿ ಈ ಸಂದರ್ಭದಲ್ಲಿ ಮಾತನಾಡುವುದು, ಉತ್ತರ ಕೊಡುವುದು ಸರಿಯಲ್ಲ, ಕಾನೂನು ಪ್ರಕಾರವಾಗಿ ಎಲ್ಲಾ ನಡೆಯುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪೊಲೀಸರಿಗೆ ನಾವು ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಹಾಗಾಗಿ ಕಾನೂನು ಪ್ರಕಾರವಾಗಿ ಎಲ್ಲವೂ ನಡೆಯುತ್ತದೆ. ಮುರುಘಾ ಶರಣರ ಬಂಧನ ಬಗ್ಗೆ ಈ ಹೊತ್ತಿನಲ್ಲಿ ಮಾತನಾಡುವುದು ಸರಿಯಲ್ಲ ಎಂದಷ್ಟೇ ಹೇಳಿದರು.

ಇಂದು ಮಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ ಬೆಳಗ್ಗೆಯೇ ಮಂಗಳೂರಿಗೆ ತೆರಳಿದ್ದಾರೆ. ಇದಕ್ಕೂ ಮುನ್ನ ಬೆಳ್ಳಂಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ, ಮುರುಘಾ ಶರಣರ ಬಂಧನ ಬಗ್ಗೆ ಮಾಹಿತಿ ನೀಡಿದ್ದಾರೆ.

ಬಿಎಸ್​ವೈ ತುರ್ತು ಭೇಟಿ ಮಾಡಿದ ಸಿಎಂ ಬೊಮ್ಮಾಯಿ, ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ. ಮೊನ್ನೆ ಪ್ರತಿಕ್ರಿಯೆ ನೀಡಿದ್ದ ಬಿ ಎಸ್ ಯಡಿಯೂರಪ್ಪ, ಸ್ವಾಮೀಜಿ ಸತ್ವ ಪರೀಕ್ಷೆ ಗೆದ್ದು ಬರುತ್ತಾರೆ ಎಂದು ನೈತಿಕ ಬೆಂಬಲ ನೀಡಿದ್ದರು. 

ಬೆಂಗಳೂರಿಗೆ ಶಿಫ್ಟ್: ಮುರುಘಾಶ್ರೀ ಕಳೆದ ಮಧ್ಯರಾತ್ರಿ ಚಿತ್ರದುರ್ಗ ಜೈಲು ಸೇರಿದ್ದು ರಾತ್ರಿಯಿಡೀ ಜೈಲಿನಲ್ಲಿ ನಿದ್ದೆಯಿಲ್ಲದೆ ಕಳೆದಿದ್ದರು. ಅವರಿಗೆ ನಸುಕಿನಲ್ಲಿ ಎದೆನೋವು, ಲೋ ಬಿಪಿ ಕಂಡುಬಂದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಹಾಜರಾಗಿದ್ದಾರೆ. ಅವರನ್ನು ಹೆಚ್ಚಿನ ತಪಾಸಣೆಗೆ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ  ಶಿಫ್ಟ್ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.







    Post a Comment

    Previous Post Next Post