ದೆಹಲಿ: ಚಾಂದಿನಿ ಚೌಕ್ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ, ಕಟ್ಟಡದ ಒಂದು ಭಾಗ ಕುಸಿತ

 ಮಧ್ಯ ದೆಹಲಿಯ ಅತ್ಯಂತ ಜನನಿಬಿಡ ಮತ್ತು ದಟ್ಟಣೆಯ ಮಾರುಕಟ್ಟೆ ಚಾಂದಿನಿ ಚೌಕ್‌ನ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದ ಮೇಲಿನ ಮಹಡಿಯಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನಂತರ ಕಟ್ಟಡದ ಒಂದು ಭಾಗ ಕುಸಿದಿದೆ.

                                 ಚಾಂದಿನಿ ಚೌಕ್ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ

By : Rekha.M
Onlike Desk

ನವದೆಹಲಿ: ಮಧ್ಯ ದೆಹಲಿಯ ಅತ್ಯಂತ ಜನನಿಬಿಡ ಮತ್ತು ದಟ್ಟಣೆಯ ಮಾರುಕಟ್ಟೆ ಚಾಂದಿನಿ ಚೌಕ್‌ನ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದ ಮೇಲಿನ ಮಹಡಿಯಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನಂತರ ಕಟ್ಟಡದ ಒಂದು ಭಾಗ ಕುಸಿದಿದೆ. ಘಟನೆಯಲ್ಲಿ ಪಕ್ಕದ ಕಟ್ಟಡಕ್ಕೂ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ.

ಭಾನುವಾರ ರಾತ್ರಿ ಇಲ್ಲಿನ ಚಾಂದಿನಿ ಚೌಕ್ ಮೆಟ್ರೋ ನಿಲ್ದಾಣದ ಬಳಿ ಇರುವ ವಾಣಿಜ್ಯ ಕಟ್ಟಡದಲ್ಲಿ ಕಾಣಿಸಿಕೊಂಡ  ಬೆಂಕಿಯನ್ನು ಸುಮಾರು 11 ಗಂಟೆಗಳ ನಂತರ ನಿಯಂತ್ರಣಕ್ಕೆ ತರಲಾಗಿದೆ. ಆದರೆ ತಂಪಾಗಿಸುವ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಅಂಗಡಿಗಳು ಮತ್ತು ಗೋಡೌನ್‌ಗಳು ಎಲ್ಲಾ ಮುಚ್ಚಲ್ಪಟ್ಟಿದ್ದರಿಂದ ಕಟ್ಟಡದೊಳಗೆ ಯಾರೂ ಸಿಕ್ಕಿಹಾಕಿಕೊಂಡಿರಲಿಲ್ಲ. ಅಗ್ನಿಶಾಮಕ ಕಾರ್ಯಾಚರಣೆಯ ಸಂದರ್ಭದಲ್ಲಿ, ಅಗ್ನಿಶಾಮಕ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ. ಆದರೆ ಅವರು ಈಗ ಚೆನ್ನಾಗಿದ್ದಾರೆ" ಎಂದು ಹಿರಿಯ ಅಗ್ನಿಶಾಮಕ ಅಧಿಕಾರಿ ಹೇಳಿದ್ದಾರೆ.

ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ, ಅಗ್ನಿಶಾಮಕ ದಳದವರು ಪಕ್ಕದ ಕಟ್ಟಡದಿಂದ ಕಾರ್ಯಾಚರಣೆ ನಡೆಸಬೇಕಾಯಿತು. ಏಕೆಂದರೆ ಭಾರಿ ಬೆಂಕಿ ಕಾಣಿಸಿಕೊಂಡ ಕಟ್ಟಡದ ಎಲ್ಲಾ ಬಾಗಿಲುಗಳು ಮತ್ತು ಕಿಟಕಿಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದವು ಮತ್ತು ಒಳಗೆ ಹೋಗಲು ಸ್ಥಳಾವಕಾಶವಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.



Post a Comment

أحدث أقدم