ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮಿನಿ ಬಸ್ ದುರ್ಘಟನೆ : ಭಯಾನಕ ಅಪಘಾತ ಕಾರಣ ೧೧ ಪ್ರಯಾಣಿಕರ ದುರ್ಮ್ಮರಣ, ಸುಮಾರು ೨೫ ಕ್ಕೂ ಅನೇಕ ಜನರಿಗೆ ಗಂಭೀರ ಗಾಯ

 ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಮೃತಪಟ್ಟು 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.



By : Rekha.M
Online Desk

ಪೂಂಚ್(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಮೃತಪಟ್ಟು 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಪೂಂಚ್ ಜಿಲ್ಲೆಯ ಸಾಜಿಯನ್ ಪ್ರದೇಶದಲ್ಲಿ ಮಿನಿ ಬಸ್ ಅಪಘಾತವಾಗಿ ಈ ಭೀಕರ ದುರ್ಘಟನೆ ಸಂಭವಿಸಿದ್ದು ಗಾಯಗೊಂಡವರನ್ನು ತಕ್ಷಣ ಮಂಡಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಮಂಡಿ ತಹಶಿಲ್ದಾರ್ ಶೆಹ್ಜಾದ್ ಲತಿಫ್ ತಿಳಿಸಿದ್ದಾರೆ.

ಮಿನಿ ಬಸ್ಸು ಮಂಡಿಯಿಂದ ಸಾಜಿಯನ್ ಗೆ ತೆರಳುತ್ತಿದ್ದ ವೇಳೆ ಅಪಘಾತವಾಗಿದ್ದು ಭಾರತೀಯ ಸೇನೆಯಿಂದ ರಕ್ಷಣಾ ಕಾರ್ಯ ಮುಂದುವರಿದಿದೆ.

ಅಪಘಾತದಲ್ಲಿ ಮೃತಪಟ್ಟವರಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಕಂಬನಿ ಮಿಡಿದಿದ್ದಾರೆ. ಜಮ್ಮು-ಕಾಶ್ಮೀರ ಗವರ್ನರ್ ಮನೋಜ್ ಸಿನ್ಹ ಅವರು ಸಂತಾಪ ಸೂಚಿಸಿದ್ದು ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.




Post a Comment

Previous Post Next Post