ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

 ನಾಡಹಬ್ಬ ದಸರಾದ ಪ್ರಧಾನ ಕವಿಗೋಷ್ಠಿಯ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರನ್ನು ಪ್ರಕಟಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಪ್ರಧಾನ ಕವಿಗೋಷ್ಟಿಯಲ್ಲಿ ರಾಜಕೀಯ ಮುಖಂಡರು ಭಾಗವಹಿಸಲಿದ್ದು,..

              ಆಹ್ವಾನ ಪತ್ರಿಕೆ

By : Rekha.M
Online Desk 

ಮೈಸೂರು: ನಾಡಹಬ್ಬ ದಸರಾದ ಪ್ರಧಾನ ಕವಿಗೋಷ್ಠಿಯ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರನ್ನು ಪ್ರಕಟಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಪ್ರಧಾನ ಕವಿಗೋಷ್ಟಿಯಲ್ಲಿ ರಾಜಕೀಯ ಮುಖಂಡರು ಭಾಗವಹಿಸಲಿದ್ದು, ನಿಧನರಾದ ಆಕಾಶವಾಣಿ ನಿಲಯ ನಿರ್ದೇಶಕ ಜಿ.ಕೆ ರವೀಂದ್ರ ಕುಮಾರ್ ಅವರ ಹೆಸರು ಆಹ್ವಾನ ಪತ್ರಿಕೆಯಲ್ಲಿದೆ.

ಅಕ್ಟೋಬರ್ 3 ರಂದು ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಸೆನೆಟ್ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಕವಿಗೋಷ್ಠಿ ನಡೆಯಲಿದೆ. ಒಟ್ಟು 37 ಮಂದಿ ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ.

ಆಕಾಶವಾಣಿ ನಿಲಯ ನಿರ್ದೇಶಕ ಜಿ.ಕೆ ರವೀಂದ್ರ ಕುಮಾರ್ ಅವರು 2019ರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆದರೂ ಅವರ ಹೆಸರು ಆಹ್ವಾನ ಪತ್ರಿಕೆಯಲ್ಲಿ ಮುದ್ರಿತವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟಿಗೆ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಇದಲ್ಲದೇ ಪ್ರತಾಪ ಸಿಂಹ ಅವರಿಗೆ ಚಾಮರಾಜನಗರ ಸಂಸದ ಎಂದು ಹೆಸರಿಸಲಾಗಿದೆ. ಅವರು ಮೈಸೂರು-ಕೊಡಗು ಸಂಸದ ಎಂದು ಮುದ್ರಿಸುವ ಬದಲು ಚಾಮರಾಜನಗರ ಎಂದು ಮುದ್ರಿಸಿದ್ದಾರೆ.

ಕವಿಗೋಷ್ಠಿಯನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ ಉದ್ಘಾಟಿಸಲಿದ್ದು, ಸುಪ್ರಸಿದ್ದ ನಾಟಕಕಾರ ಮತ್ತು ಕವಿ ಡಾ.ಎಚ್. ಎಸ್ ಶಿವಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆ.


Post a Comment

أحدث أقدم