ಗುಜರಾತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

 

ಹಮದಾಬಾದ್: ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ನಿರುದ್ಯೋಗ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ಶನಿವಾರ ಬೆಳಗ್ಗೆಯಿಂದ 4 ಗಂಟೆಗಳ ಕಾಲ ಸಾಂಕೇತವಾಗಿ ಗುಜರಾತ್ ಬಂದ್ ಗೆ ಕರೆ ನೀಡಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವ್ಯಾಪಾರಸ್ಥರು, ಅಂಗಡಿ ಮಾಲೀಕರು, ಬಟ್ಟೆ ಮಾರುಕಟ್ಟೆ ಕಾರ್ಮಿಕರು, ಸಂಘ-ಸಂಸ್ಥೆ ಗಳು, ಸಣ್ಣ ವ್ಯಾಪಾರಿಗಳು ಬಂದ್ ಗೆ ಬೆಂಬಲ ನೀಡಬೇಕೆಂದು ಶುಕ್ರವಾರ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೂರ್ ಮನವಿ ಮಾಡಿಕೊಂಡಿದ್ದರು.

ಗುಜರಾತ್ ನಲ್ಲಿ ಜನತಾ ಪಕ್ಷ ಕಳೆದ 27 ವರ್ಷಗಳಿಂದ ಆಡಳಿತ ನಡೆಸುತ್ತಿದ್ದು, ಹಣದುಬ್ಬರ, ನಿರುದ್ಯೋಗ, ಭ್ರಷ್ಟಾಚಾರ ಮಿತಿ ಮೀರಿದೆ. ಹಾಲು, ಮೊಸಲು, ಪನ್ನೀರ್ ನಂತಹ ದಿನಬಳಕೆ ವಸ್ತುಗಳ ಮೇಲೆ ಜಿಎಸ್ ಟಿ ವಿಧಿಸುವ ಮೂಲಕ ಜನರ ಮೇಲೆ ಹೊರೆ ಹೊರಿಸಿದೆ ಎಂದು ಆರೋಪಿಸಿದ್ದಾರೆ.

ಬಂದ್ ವೇಳೆ ತುರ್ತು ಸೇವೆಗಳಿಗೆ ಬಂದ್ ಅನ್ವಯಿಸುವುದಿಲ್ಲ ಎಂದು ಠಾಕೂರ್ ತಿಳಿಸಿದ್ದಾರೆ.

Post a Comment

أحدث أقدم