By : Ashwini Rathod
Online disk
ನವದೆಹಲಿ: ವಿವಾಹಿತ ಅಥವಾ ಅವಿವಾಹಿತ ಸೇರಿದಂತೆ ಎಲ್ಲಾ ಮಹಿಳೆಯರು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂಕೋರ್ಟ್ ಗುರುವಾರ ತೀರ್ಪು ನೀಡಿದೆ.
ವಿವಾಹಿತೆ ಎಂಬ ಕಾರಣದ ಹಿನ್ನೆಲೆಯಲ್ಲಿ ಬಲವಂತವಾಗಿ ಗರ್ಭಪಾತ ಮಾಡಿಸುವಂತಿಲ್ಲ. ಮೆಡಿಕಲ್ ಟರ್ಮಿ ನೇಶನ್ ಆಫ್ ಪ್ರೆಗ್ನೆನ್ಸಿ ಕಾಯ್ದೆ ಪ್ರಕಾರ ವಿವಾಹಿತ ಅಥವಾ ಅವಿವಾಹಿತ ಮಹಿಳೆ ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕನ್ನು ಹೊಂದಿದ್ದಾರೆ. 24 ವಾರಗಳ ಗರ್ಭಧಾರಣೆಯನ್ನು ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ವಿವಾಹಿತ ಮಹಿಳೆಗೆ ಬಲವಂತವಾಗಿ ಗರ್ಭಪಾತ ಮಾಡಿಸಿದಲ್ಲಿ ಇದನ್ನು ಅತ್ಯಾಚಾರ ಎಂದು ಪರಿಗಣಿಸ ಬಹುದಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಕಾನೂನು ಯಾವತ್ತೂ ಸ್ಥಿರವಾಗಿರಬಾರದು ಮತ್ತು ಸಾಮಾಜಿಕ ವಾಸ್ತವಗಳನ್ನು ಗಮನದಲ್ಲಿಟ್ಟುಕೊಂಡು ಅರ್ಥೈಸಬೇಕಾಗಿದೆ ಎಂದು ಸುಪ್ರೀಂ ತಿಳಿಸಿದೆ.
إرسال تعليق