ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ ( ಓಬಿಸಿ) ದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ.
ಮಧು ಬಂಗಾರಪ್ಪ
ಬೆಂಗಳೂರು: ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ ( ಓಬಿಸಿ) ದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ.
ಎಐಸಿಸಿಯ ಒಬಿಸಿ ಘಟಕದ ಅಧ್ಯಕ್ಷ ಕ್ಯಾಫ್ಟನ್ ಅಜಯ್ ಸಿಂಗ್ ಯಾದವ್ ಅವರು ಈ ನೇಮಕದ ಆದೇಶ ಹೊರಡಿಸಿದ್ದಾರೆ. ಸೊರಬ ಕ್ಷೇತ್ರದ ಮಾಜಿ ಜೆಡಿಎಸ್ ಶಾಸಕರಾಗಿದ್ದ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಳೆದ 2021 ಜುಲೈನಲ್ಲಿ ಕಾಂಗ್ರೆಸ್ ಸೇರಿದ್ದರು
ಈ ಸಂಬಂಧ ಬುಧವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಹಿಂದುಳಿದ ವರ್ಗಗಳ ಸಂಘಟನೆ ಬಲಪಡಿಸಲು ಮುಂದಾಗುವಂತೆ ಎಐಸಿಸಿ ಆದೇಶದಲ್ಲಿ ಸೂಚಿಸಲಾಗಿದೆ.
ಇಷ್ಟು ವರ್ಷಗಳ ಕಾಲ ಜೆಡಿಎಸ್ ನಲ್ಲಿ ಇದ್ದ ಮಧು ಬಂಗಾರಪ್ಪ ಕಳೆದ ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿಯವರಿಂದ ಅಂತರ ಕಾಯ್ದುಕೊಂಡಿದ್ದರು. ಆ ಬಳಿಕ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಗೆ ಕರೆ ತಂದಿದ್ದರು. ಆದರೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂದು ಮಧು ಬಂಗಾರಪ್ಪ ಬೇಸರಗೊಂಡಿದ್ದರು.
إرسال تعليق