ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಆರಗ ಜ್ಞಾನೇಂದ್ರಬೆಂಗಳೂರು: ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಿಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಿಕೆ ಮಾತ್ರ ಅನುಮತಿ ನೀಡಲಾಗಿದೆ, ಎಂದಿದ್ದಾರೆ. ನೆರೆಯ ಭೂತಾನ್ ದೇಶ, ಭಾರತದ ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ ಎಂಬುದನ್ನು ಸಚಿವರು ನೆನಪಿಸಿದ್ದಾರೆ.
ರಾಜ್ಯ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಸಚಿವರು, ಅಡಿಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದು ಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕ ದಲ್ಲಿದ್ದು, ಭೂತಾನ್ ಅಡಕೆ ಆಮದು ವಿಚಾರವಾಗಿಯೂ, ಮಾತುಕತೆ ನಡೆಸಲಾಗುವುದು, ಬೆಳೆಗಾರರುಯಾವುದೇ ಗೊಂದಲ, ಆತಂಕಕ್ಕೊಳಗಾಗುವುದು ಬೇಡ ಎಂದು ಅಭಯ ನೀಡಿದ್ದಾರೆ. ಈ ವಿಚಾರ ಕುರಿತು, ಕೇಂದ್ರಕ್ಕೆ ಮನವರಿಕೆ ಮಾಡಿ ಕೊಡಲು ಲೋಕ ಸಭಾ ಸದಸ್ಯರ ನೇತೃತ್ವದಲ್ಲಿ, ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದೂ ಸಚಿವರು ತಿಳಿಸಿದ್ದಾರೆ.
Post a Comment