ಪೊಲೀಸ್ ಕ್ರಮದ ಹಿಂದೆ, ಅಪರಾಧಗಳ ಹಿನ್ನೆಲೆ ಮಾತ್ರ ಗಣನೆ, ಧರ್ಮ, ಅಲ್ಪಸಂಖ್ಯಾತರು ಅಥವಾ ಬಹುಸಂಖ್ಯಾತರಲ್ಲ: ಆರಗ ಜ್ಞಾನೇಂದ್ರ

 ಪೋಲೀಸರು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ, ಕೇವಲ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣಿಸುತ್ತಾರೆಯೇ ವಿನಹ, ಅಲ್ಪಸಂಖ್ಯಾತ, ಬಹು ಸಂಖ್ಯಾತರು, ಜಾತಿ ಅಥವಾ ಧರ್ಮವನ್ನು ನೋಡಿ,ಅಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

              ಆರಗ ಜ್ಞಾನೇಂದ್ರ

By : Rekha.M
Online Desk

ಬೆಂಗಳೂರು: ಪೋಲೀಸರು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ, ಕೇವಲ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣಿಸುತ್ತಾರೆಯೇ ವಿನಹ, ಅಲ್ಪಸಂಖ್ಯಾತ, ಬಹು ಸಂಖ್ಯಾತರು, ಜಾತಿ ಅಥವಾ ಧರ್ಮವನ್ನು ನೋಡಿ, ಅಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ, ಇಂದು ಮಾತನಾಡಿದ ಸಚಿವರು, ಸಮಾಜದಲ್ಲಿ, ಶಾಂತಿ ಸುವ್ಯವಸ್ಥೆ, ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಹೊತ್ತಿರುವ ಪೊಲೀಸ್ ಸಿಬ್ಬಂದಿಯೊಂದಿಗೆ, ಎಲ್ಲರೂ ಸಹಕರಿಸಬೇಕು, ಎಂದು ಹೇಳಿದರು.

ಕಾನೂನನ್ನು ಕೈಗೆ ತೆಗೆದುಕೊಳ್ಳುವ ಯಾರ ವಿರುದ್ಧವೇ ಆಗಲಿ, ಕ್ರಮ ಜರುಗಿಸಲಾಗುತ್ತದೆ ಎಂದ ಸಚಿವರು, ಖಚಿತ ಮಾಹಿತಿ ಮೇರೆಗೆ ಎನ್ ಐ ಎ ಸಿಬ್ಬಂದಿಗಳು, ಹಲವು ಕಡೆ ಶೋಧ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಶಿವಮೊಗ್ಗ ಪೊಲೀಸರು, ಇಬ್ಬರು ವ್ಯಕ್ತಿಗಳು, ಭಯೋತ್ಪಾದಕ ಸಂಘಟನೆ ಜತೆ, ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿ ಮೇರೆಗೆ ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ತನಿಖೆಯನ್ನು ಚುರುಕಿನಿಂದ ನಡೆಸಿರುವ ಶಿವಮೊಗ್ಗ, ಪೊಲೀಸರ, ಕಾರ್ಯ ಕ್ಷಮತೆಯ ಬಗ್ಗೆ, ಅಭಿನಂದಿಸುತ್ತೇನೆ, ಎಂದೂ ಸಚಿವರು ಹೇಳಿದರು.

    ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪೇ- ಸಿಎಮ್ ಅಭಿಯಾನದ ಬಗ್ಗೆ, ಕಟುವಾಗಿ ಪ್ರತಿಕ್ರಿಯಿಸಿದ ಸಚಿವರು, ಜನರು ಪಕ್ಷದಿಂದ ದೂರವಾಗುತ್ತಿದ್ದು, ಇದರಿಂದ ಹತಾಶರಾದ ಕಾಂಗ್ರೆಸ್ ನಾಯಕರು, ಇಂಥಹ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರೂ ಮಾಜಿ ವಿಧಾನ ಸಭಾ ಸ್ಪೀಕರ್ ಸಹ ಆಗಿದ್ದ, ಕಾಂಗ್ರೆಸ್ ನಾಯಕರ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಈಗಾಗಲೇ ಹೇಳಿದ್ದು, ಕಾಂಗ್ರೆಸ್ ನಾಯಕರ ಬಣ್ಣ ಬಯಲು ಮಾಡಿದೆ ಎಂದು ಹೇಳಿದರು.




    Post a Comment

    Previous Post Next Post