ಐಷಾರಾಮಿ ನೋಯ್ಡಾ ಕಾಂಪ್ಲೆಕ್ಸ್‌ನಲ್ಲಿ ಮಹಿಳೆಯೊಬ್ಬರು ಭದ್ರತಾ ಸಿಬ್ಬಂದಿಗೆ ಪದೇ ಪದೆ ಕಪಾಳಮೋಕ್ಷ ಮಾಡಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಸಾಂದರ್ಭಿಕ ಚಿತ್ರ
ನೋಯ್ಡಾ: ಐಷಾರಾಮಿ ನೋಯ್ಡಾ ಕಾಂಪ್ಲೆಕ್ಸ್‌ನಲ್ಲಿ ಮಹಿಳೆಯೊಬ್ಬರು ಭದ್ರತಾ ಸಿಬ್ಬಂದಿಗೆ ಪದೇ ಪದೆ ಕಪಾಳಮೋಕ್ಷ ಮಾಡಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಮತ್ತೊಬ್ಬ ಮಹಿಳೆ ಇದೇ ರೀತಿಯಲ್ಲಿ ಸೆಕ್ಯುರಿಟಿ ಗಾರ್ಡ್‌ರನ್ನು ಅವಾಚ್ಯವಾಗಿ ನಿಂದಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾದ ಕೆಲವೇ ವಾರಗಳ ನಂತರ ಈ ಘಟನೆ ಬೆಳಕಿಗೆ ಬಂದಿದೆ.
ಮೂಲಗಳ ಪ್ರಕಾರ, ಪೊಲೀಸರು ಮಹಿಳೆಯನ್ನು ಬಂಧಿಸಿದ್ದರು. ಆದರೆ, ನಂತರ ಜಾಮೀನಿನ ಮೇಲೆ ಅವರು ಬಿಡುಗಡೆಯಾಗಿದ್ದಾರೆ.
ಶನಿವಾರ ಮಧ್ಯಾಹ್ನ, 3 ನೇ ಹಂತದ ಕೊಟ್ವಾಲಿ ನೆರೆಹೊರೆಯಲ್ಲಿರುವ ಕ್ಲಿಯೋ ಕೌಂಟಿ ಸೊಸೈಟಿಯ ಆವರಣದಲ್ಲಿ ಮಹಿಳೆಯು ನಡೆದುಕೊಂಡು ಬರುತ್ತಿರುವುದನ್ನು ನೋಡಬಹುದು ಮತ್ತು ಭದ್ರತಾ ಸಿಬ್ಬಂದಿ ಮೇಲೆ ಹಠಾತ್ತನೆ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
إرسال تعليق