ಬೆಳಗಾವಿಯ ನೇಗಿನಹಾಳ ಮಠದ ಲಿಂಗಾಯತ ಮಠಾಧೀಶ ಬಸವ ಸಿದ್ದಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಮಹಿಳೆಯರಿಗಾಗಿ ಹುಡುಕಾಟ ನಡೆಸಿದ್ದಾರೆ.
ನೇಗಿನಹಾಳ ಮಠಾಧೀಶ ಬಸವ ಸಿದ್ದಲಿಂಗ ಸ್ವಾಮೀಜಿ
ಬೆಳಗಾವಿ: ಬೆಳಗಾವಿಯ ನೇಗಿನಹಾಳ ಮಠದ ಲಿಂಗಾಯತ ಮಠಾಧೀಶ ಬಸವ ಸಿದ್ದಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಮಹಿಳೆಯರಿಗಾಗಿ ಹುಡುಕಾಟ ನಡೆಸಿದ್ದಾರೆ.
ವಿವಿಧ ಮಠಾಧೀಶರು ಲೈಂಗಿಕ ದೌರ್ಜನ್ಯದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಫೋನ್ ನಲ್ಲಾ ಮಾತನಾಡಿದ್ದ ಸಂಭಾಷಣೆ ವೈರಲ್ ಆಗಿದ್ದು, ಸಾವಿಗೆ ಕಾರಣವಾಯಿತು ಎನ್ನಲಾಗಿದೆ.
ನೇಗಿನಹಾಳ್ ನಿವಾಸಿ ಸೋಮಪ್ಪ ಈರಪ್ಪ ಬಾಗೇವಾಡಿ ಎಂಬುವವರ ದೂರಿನ ಮೇರೆಗೆ ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಬೈಲಹೊಂಗಲ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಯು.ಎಚ್.ಸಾತೇನಹಳ್ಳಿ ತಿಳಿಸಿದ್ದಾರೆ. ಮಂಗಳವಾರ ನಡೆದ ಶ್ರೀಗಳ ಅಂತ್ಯಕ್ರಿಯೆಯಲ್ಲಿ ಹಲವಾರು ಗಣ್ಯರು ಮತ್ತು ರಾಜಕೀಯ ಮುಖಂಡರು ಭಾಗವಹಿಸಿದ್ದರು.
Post a Comment