ದೆಹಲಿ ಸರ್ಕಾರದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಇಂದು ಶುಕ್ರವಾರ ದಾಳಿ ನಡೆಸಿದೆ.
ಜಾರಿ ನಿರ್ದೇಶನಾಲಯ
Online Desk
ಬೆಂಗಳೂರು: ದೆಹಲಿ ಸರ್ಕಾರದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಇಂದು ಶುಕ್ರವಾರ ದಾಳಿ ನಡೆಸಿದೆ.
ಬೆಂಗಳೂರು, ಮಂಗಳೂರು, ಹೈದರಾಬಾದ್, ಚೆನ್ನೈ ಸೇರಿದಂತೆ 40ಕ್ಕೂ ಹೆಚ್ಚು ಕಡೆಗಳಲ್ಲಿ ಜಾರಿ ನಿರ್ದೇಶನಾಲಯದ ಶೋಧ ಕಾರ್ಯ ಮುಂದುವರಿದಿದೆ. ಬೆಳ್ಳಂಬೆಳಗ್ಗೆ ರೇಡ್ ಮಾಡಿರುವ ಇಡಿ ಅಧಿಕಾರಿಗಳು 50ಕ್ಕೂ ಹೆಚ್ಚು ಕಡೆ ಪರಿಶೀಲನೆ ನಡೆಸುತ್ತಿದ್ದಾರೆ.
ಹಲವು ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತೀಚೆಗೆ ದೆಹಲಿಯ ಆಪ್ ಸರ್ಕಾರದ ಮೇಲೆ ಲಿಕ್ಕರ್ ಪಾಲಿಸಿ ಹಗರಣ ಆರೋಪ ಕೇಳಿಬಂದು ತೀವ್ರ ಕೋಲಾಹಲ ಸೃಷ್ಟಿಯಾಗಿತ್ತು. ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆ, ಕಚೇರಿ ಮೇಲೆ ಇಡಿ, ಸಿಬಿಐ ದಾಳಿ ನಡೆದಿದ್ದವು.
Post a Comment