ಮೈಸೂರಿಗೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ದೇವಿಗೆ ಪೂಜೆ

 ನಾಡಹಬ್ಬ ದಸರಾಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಜ್ಜಾಗಿದ್ದು ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದಾರೆ. ಬುಡಕಟ್ಟು ಜನಾಂಗದ ದೇಶದ ಪ್ರಪ್ರಥಮ ಪ್ರಜೆ ಮಹಿಳೆಯಾಗಿರುವ ರಾಷ್ಟ್ರಪತಿಗಳು ಈ ಬಾರಿ ದಸರಾವನ್ನು ಉದ್ಘಾಟಿಸುತ್ತಿರುವುದು ವಿಶೇಷ.

                    ಮೈಸೂರಿಗೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,                                                                        ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್

By : Rekha.M
Online Desk

ಮೈಸೂರು: ನಾಡಹಬ್ಬ ದಸರಾಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಜ್ಜಾಗಿದ್ದು ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದಾರೆ. ಬುಡಕಟ್ಟು ಜನಾಂಗದ ದೇಶದ ಪ್ರಪ್ರಥಮ ಪ್ರಜೆ ಮಹಿಳೆಯಾಗಿರುವ ರಾಷ್ಟ್ರಪತಿಗಳು ಈ ಬಾರಿ ದಸರಾವನ್ನು ಉದ್ಘಾಟಿಸುತ್ತಿರುವುದು ವಿಶೇಷ.

ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳು ಸರಳವಾಗಿ ಸಾಂಪ್ರದಾಯಿಕವಾಗಿ ಆಚರಿಸಿದ್ದ ಮೈಸೂರು ದಸರಾದ ವೈಭವ ಹಿಂದಿನದಕ್ಕೆ ಮರಳಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ರಾಷ್ಟ್ರಪತಿಗಳು ಚಾಲನೆ ನೀಡಲಿದ್ದಾರೆ. 

ಮೈಸೂರಿನ ಮಡಕಳ್ಳಿ ಏರ್ ಪೋರ್ಟ್ ನಲ್ಲಿ ಬಂದಿಳಿದ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮೊದಲಾದವರು ಸಾಂಪ್ರದಾಯಿಕವಾಗಿ ಸ್ವಾಗತಿಸಿದರು. 

ರಾಷ್ಟ್ರಪತಿಗಳು ರಾಜ್ಯದ ನಾಯಕರು, ಗಣ್ಯರೊಂದಿಗೆ ಈಗಾಗಲೇ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ.



Post a Comment

Previous Post Next Post