ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಆತ್ಮನಿರ್ಭರ ಭಾರತಕ್ಕೆ ನಾವೆಲ್ಲ ಸಂಕಲ್ಪ ಮಾಡೋಣ, ಒಡಿಶಾದ ಸಾಮಾನ್ಯ ಕುಟುಂಬದಿಂದ ಬಂದಿರುವ ಮಹಿಳೆಯನ್ನು ಗೌರವಿಸುವ ಮೂಲಕ ಹುಬ್ಬಳ್ಳಿ ಧಾರವಾಡದ ಜನತೆ ದೇಶದ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ಕೂಡ ಇಲ್ಲಿಯೇ ಹುಬ್ಬಳ್ಳಿ-ಧಾರವಾಡದಲ್ಲಿ ಆಡಿ ಬೆಳೆದವರು ಅವರ ನೇತೃತ್ವದಲ್ಲಿ ರಾಜ್ಯ ಅಭಿವೃದ್ಧಿಯಡೆಗೆ ಸಾಗಲಿ ಎಂದು ಹೇಳಿದರು.
ಸರಳ ನಡೆ, ನುಡಿಗೆ ಹೆಸರಾದ ರಾಷ್ಟ್ರಪತಿ: ಪ್ರಲ್ಹಾದ್ ಜೋಶಿ
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಷಿ ಮಾತನಾಡಿ, ಬಹಳ ವರ್ಷಗಳ ನಂತರ ಹುಬ್ಬಳ್ಳಿ ಧಾರವಾಡ ಅವಳಿ ನಗರಕ್ಕೆ ದೇಶದ ರಾಷ್ಟ್ರಪತಿಯವರು ಆಗಮಿಸಿರುವುದು ಸಂತಸ ತಂದಿದೆ. ಧಾರವಾಡ ಜಿಲ್ಲೆಯ ಇತಿಹಾಸ ಐದನೇ ಶತಮಾನದಿಂದ ಪ್ರಾರಂಭವಾಗುತ್ತದೆ, ಚಾಲುಕ್ಯರು, ರಾಷ್ಟ್ರಕೂಟರು, ವಿಜಯನಗರ ಅರಸರ ಆಳ್ವಿಕೆಗೆ ಈ ಪ್ರದೇಶ ಒಳಪಟ್ಟಿತ್ತು, ಸ್ವಾತಂತ್ರ್ಯ ಚಳುವಳಿಗೂ ಈ ಜಿಲ್ಲೆ ಗಮನಾರ್ಹ ಕೊಡುಗೆ ನೀಡಿದೆ ಎಂದರು.
ಸಂಗೀತ, ಸಾಹಿತ್ಯಕ್ಕೆ ಈ ಭಾಗದ ಕೊಡುಗೆ ಮಹತ್ವದ್ದು, ಭಾರತರತ್ನ ಪಂಡಿತ ಭೀಮಸೇನ ಜೋಷಿ, ಮಲ್ಲಿಕಾರ್ಜುನ ಮನಸೂರ ಮತ್ತಿತರ ಮೇಧಾವಿ ಸಂಗೀತಗಾರರು ಇಲ್ಲಿಂದ ಹೊರಹೊಮ್ಮಿದ್ದಾರೆ. ಕನ್ನಡಕ್ಕೆ ಬಂದಿರುವ ಎಂಟು ಜ್ಞಾನಪೀಠಗ ಪ್ರಶಸ್ತಿಗಳಲ್ಲಿ ಜಿಲ್ಲೆ ಬಹುಪಾಲು ಹೊಂದಿದೆ. ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದಿರುವ ದ್ರೌಪದಿ ಮುರ್ಮು ಅವರು, ಗ್ರಾಮ ಪಂಚಾಯತಿ ಸದಸ್ಯರಾಗಿ, ಉತ್ತಮ ಶಾಸಕರಾಗಿ, ಸಚಿವರಾಗಿ, ರಾಜ್ಯಪಾಲರಾಗಿ ಇದೀಗ ರಾಷ್ಟ್ರಪತಿಯಾಗಿ ಉನ್ನತ ಹುದ್ದೆಗೆ ಏರಿದ್ದರೂ ಕೂಡ ಸರಳ ನಡೆ, ನುಡಿಗೆ ಹೆಸರಾಗಿದ್ದಾರೆ. ಶೈಕ್ಷಣಿಕ ಕೇಂದ್ರವಾಗಿರುವ ಧಾರವಾಡ ಜಿಲ್ಲೆಗೆ ಐಐಐಟಿ ಉದ್ಘಾಟಿಸಲು ಆಗಮಿಸಿರುವುದು ಹೆಮ್ಮೆಯ ಸಂಗತಿ ಎಂದರು.
ಪೌರಸನ್ಮಾನ
ದೇಶದ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರಿಗೆ ಶ್ರೀಸಿದ್ಧಾರೂಢರ ಬೆಳ್ಳಿ ಪ್ರತಿಮೆ, ಬಿನ್ನವತ್ತಳೆ, ಯಾಲಕ್ಕಿ ಹಾರ, ಶ್ರೀಸಿದ್ಧಾರೂಢರ ಮಹಾತ್ಮೆ ಕುರಿತ ಗ್ರಂಥಗಳು, ಧಾರವಾಡ ಪೇಡೆಯನ್ನು ಮಹಾನಗರಪಾಲಿಕೆ ನೀಡಿ ಗೌರವಿಸಿತು.
ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗಣಿ, ಭೂವಿಜ್ಞಾನ ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್, ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ ಶೆಟ್ಟರ್, ಶಾಸಕರಾದ ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಅಮೃತ ದೇಸಾಯಿ ಮತ್ತಿತರರು ವೇದಿಕೆಯಲ್ಲಿದ್ದರು.
Post a Comment