ಮಳೆಯಿಂದ ಹಾನಿಗೊಳಗಾಗಿರುವ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗುರುವಾರ ಭೇಟಿ ನೀಡಲಿದ್ದಾರೆ.
ಸಿದ್ದರಾಮಯ್ಯ
ಬೆಂಗಳೂರು: ಮಳೆಯಿಂದ ಹಾನಿಗೊಳಗಾಗಿರುವ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗುರುವಾರ ಭೇಟಿ ನೀಡಲಿದ್ದಾರೆ.
ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ತೀವ್ರ ಮಳೆಯಿಂದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯವಾಗಿ ಸರ್ಜಾಪುರ, ವೈಟ್‌ಫೀಲ್ಡ್ ಭಾಗದಲ್ಲಿ ನಿವಾಸಿಗಳು ಅಷ್ಟೇ ಅಲ್ಲ, ಅಲ್ಲಿ ರಸ್ತೆಯಲ್ಲಿ ನೀರು ನಿಂತಿರುವುದರಿಂದ ಸುತ್ತಮುತ್ತಲಿನ ಎಲ್ಲಾ ಕಂಪೆನಿಗಳ ನೌಕರರು ಸಹ ಇದರಿಂದ ತೊಂದರೆ ಅನುಭವಿಸುತ್ತಿದ್ದಾರೆ.
ಸಿದ್ದರಾಮಯ್ಯ ಅವರು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ನಗರ ವೀಕ್ಷಣೆ ಆರಂಭ ಮಾಡಲಿದ್ದಾರೆ. ಯಮಲೂರು, ಬೆಳ್ಳಂದೂರು, ದೊಡ್ಡಕನ್ನೆಲ್ಲಿ, ಮುನ್ನೆಕೊಳಾಲ ಗ್ರಾ, ಸಿದ್ದಾಪುರ ಮತ್ತು ವರ್ತೂರು ಕೋಡಿ ಪ್ರದೇಶಗಳಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ಸಮಸ್ಯಗಳನ್ನು ವೀಕ್ಷಿಸಲಿದ್ದಾರೆ.
Post a Comment