ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಂಗಳವಾರವೂ ಮಳೆ ಆರ್ಭಟ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೀಗಾಗಿ ಬೆಂಗಳೂರು ಪೂರ್ವ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿ...
ಬೆಂಗಳೂರು
ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಪೂರ್ವ ತಾಲೂಕಿನ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜೊತೆಗೆ ಮುಂದಿನ ಎರಡನೇ ಶನಿವಾರ ಪೂರ್ಣ ದಿನ ತರಗತಿ ನಡೆಸಲು ಸೂಚಿಸಲಾಗಿದೆ.
ಧಾರಾಕಾರ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಿನಾಂಕ 7-9-2022ರಂದು ರಜೆ ಘೋಷಿಸಲಾಗಿದೆ ಎಂದು ಬಿಇಒ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
إرسال تعليق