ಮಳೆರಾಯನ ಆರ್ಭಟ : ಉತ್ತರ ಪ್ರದೇಶದಲ್ಲಿ ಭಾರಿ ಮಳೆಯ ಕಾರಣ ಲಕ್ನೋದಲ್ಲಿ ಮನೆಯ ಗೋಡೆ ಕುಸಿದು ೯ ಜನರ ದುರ್ಮರಣ, ಸಿ ಎಂ ಪರಿಹಾರ ಘೋಷಣೆ

 ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಭಾರೀ ಮಳೆಯಾಗಿದ್ದು, ನಗರದ ಹಲವು ಭಾಗಗಳು ಜಲಾವೃತವಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಲಕ್ನೋದಲ್ಲಿ ಶಾಲೆಗಳನ್ನು ಮುಚ್ಚುವುದಾಗಿ ಆಡಳಿತ ಘೋಷಿಸಿದೆ.

                        ಮನೆ ಗೋಡೆ ಕುಸಿದ ನಂತರ ದೃಶ್ಯ

By : Rekha.M
Online Desk

ಲಕ್ನೊ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಭಾರೀ ಮಳೆಯಾಗಿದ್ದು, ನಗರದ ಹಲವು ಭಾಗಗಳು ಜಲಾವೃತವಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಲಕ್ನೋದಲ್ಲಿ ಶಾಲೆಗಳನ್ನು ಮುಚ್ಚುವುದಾಗಿ ಆಡಳಿತ ಘೋಷಿಸಿದೆ.

ಭಾರೀ ಮಳೆಯಿಂದಾಗಿ ಲಕ್ನೋದ ದಿಲ್ಕುಶಾ ಪ್ರದೇಶದಲ್ಲಿ ಗೋಡೆ ಕುಸಿದು ಒಂಬತ್ತು ಜನರು ಮೃತಪಟ್ಟಿದ್ದಾರೆ ಜಂಟಿ ಪೊಲೀಸ್ ಕಮಿಷನರ್ (ಕಾನೂನು ಮತ್ತು ಸುವ್ಯವಸ್ಥೆ) ಪಿಯೂಷ್ ಮೊರ್ಡಿಯಾ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಉನ್ನಾವೊದಲ್ಲಿ ನಿನ್ನೆ ತಡರಾತ್ರಿ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಮೃತಪಟ್ಟು ಒಬ್ಬರು ಗಾಯಗೊಂಡಿದ್ದಾರೆ. 

ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ ಪೂರ್ವ ಭಾಗದ ಕೆಲವು ಸ್ಥಳಗಳಲ್ಲಿ ಮತ್ತು ಪಶ್ಚಿಮ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಸಿಡಿಲು ಸಹಿತ ಗುಡುಗು ಸಹಿತ ಮಳೆಯಾಗಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ಗಾಯಾಳುಗಳನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಜ್ಯದಲ್ಲಿ ವಾಯುಭಾರ ಕುಸಿತದಿಂದ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಳೆಯವರೆಗೆ ಇದೇ ಪರಿಸ್ಥಿತಿ ಮುಂದುವರಿಯಬಹುದು ಎಂದು ಹೇಳಲಾಗುತ್ತಿದೆ.



    Post a Comment

    Previous Post Next Post