ಬಿ ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ: ಅವರ ಕುಟುಂಬದ ಸದಸ್ಯರ ವಿರುದ್ಧ ಎಫ್ ಐ ಆರ್ ದಾಖಲಿಸಿ , ತನಿಖೆ ಮಾಡಲು ಆದೇಶ ಕೊಟ್ಟ ಕೋರ್ಟ್

 ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕುಟುಂಬ ಸದಸ್ಯರು ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಕುರಿತು ಎಫ್ ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ಜಡ್ಜ್ ಕೋರ್ಟ್ ಬುಧವಾರ ಆದೇಶಿಸಿದೆ.

                          ಬಿಎಸ್ ಯಡಿಯೂರಪ್ಪ

By : Rekha.M
Online Desk

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕುಟುಂಬ ಸದಸ್ಯರು ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಕುರಿತು ಎಫ್ ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ಜಡ್ಜ್ ಕೋರ್ಟ್ ಬುಧವಾರ ಆದೇಶಿಸಿದೆ.

ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಖಾಸಗಿ ದೂರಿನ ವಿಚಾರಣೆ ನಡೆಸುವಂತೆ ಹೈಕೋರ್ಟ್ ಸೆಪ್ಟೆಂಬರ್ 7 ರಂದು ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತ್ತು. ಒಂದು ವಾರದ ನಂತರ ಇದೀಗ ನ್ಯಾಯಾಲಯ ಈ ಆದೇಶ ಪ್ರಕಟಿಸಿದೆ. ದೂರುದಾರ ಟಿಜೆ ಅಬ್ರಹಾಂ ಅವರಿಗೆ ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದರಿಂದ ಕೆಳ ನ್ಯಾಯಾಲಯ ಜುಲೈ 8ರಂದು ದೂರನ್ನು ವಜಾಗೊಳಿಸಿತ್ತು. ಆದರೆ, ದೂರುದಾರರು ರಾಜ್ಯಪಾಲರಿಂದ ಮಂಜೂರಾತಿ ಪಡೆಯಲು ಸಮರ್ಥ ಅಧಿಕಾರಿಯಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಗೆ  ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್ಸ್ ಸ್ಟ್ರಕ್ಷನ್ ಕಂಪನಿಯಿಂದ ಕೋಟ್ಯಂತರ ರೂ. ನಗದು ಹಾಗೂ ಶೆಲ್ ಕಂಪನಿಗಳ ಮೂಲಕ ಲಂಚ ಪಡೆದ ಆರೋಪದಡಿ ಯಡಿಯೂರಪ್ಪ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ದೂರು ದಾಖಲಾಗಿದೆ.

ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. "ಈ ಯಾವುದೇ ಆರೋಪಗಳಲ್ಲಿ ಯಾವುದೇ ಸತ್ಯವಿಲ್ಲ, ನಾನು ಈ ಎಲ್ಲಾ (ಪ್ರಕರಣಗಳಿಂದ) ಹೊರಬರುತ್ತೇನೆ. ಈ ವಿಷಯಗಳು ಸಹಜ, ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ  ಎಂದು ಅವರು ಹೇಳಿದರು. ತಮ್ಮ ವಿರುದ್ದ ಷಡ್ಯಂತ್ರ ನಡೆದಿದೆ ಎಂದು ಅವರು ತಿಳಿಸಿದರು. 

Post a Comment

أحدث أقدم