ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಆಸ್ತಿ ದಾಖಲೆಗಳ ಪರಿಶೀಲನೆ

 ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕನಕಪುರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಿದೆ.

        ಡಿಕೆ ಶಿವಕುಮಾರ್

By : Rekha.M
Online Desk

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕನಕಪುರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಿದೆ. 

ಕನಕಪುರದ ತಹಶೀಲ್ದಾರ್ ಅವರನ್ನು ಕರೆದುಕೊಂಡ ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಡಿಕೆ ಶಿವಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು. ದಾಳಿ ವೇಳೆ ದಾಖಲೆಗಳ ಪರಿಶೀಲನೆ ಜೊತೆಗೆ ಜಿಲ್ಲೆಯಲ್ಲಿ ಅವರಿಗೆ ಸೇರಿದ ಆಸ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕಿದೆ.

ಡಿಕೆ ಶಿವಕುಮಾರ್ ಕುಟುಂಬಸ್ಥರು, ಸಂಬಂಧಿಕರ ಹೆಸರಿನಲ್ಲಿನ ಭೂಮಿ ನೋಂದಣಿಯಾಗಿರುವ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಿಬಿಐ ಅಧಿಕಾರಿಗಳು ಕನಕಪುರ, ದೊಡ್ಡಆಲಹಳ್ಳಿ, ಸಂತೆ  ಕೋಡಿಹಳ್ಳಿ ಮನೆ, ತೋಟದ ಮನೆ-ಜಮೀನು ಮತ್ತಿತ್ತರ ಸ್ಥಳಗಳಿಗೆ ಭೇಟಿ ನೀಡಿ ಆಸ್ತಿ-ಪಾಸ್ತಿ ಅದಕ್ಕೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. 

ಸಿಬಿಐ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್ ಅವರು, ಕೇಂದ್ರೀಯ ತನಿಖಾ ದಳಕ್ಕೆ ತಾವು ಹೊಂದಿರುವ ಆಸ್ತಿ-ಪಾಸ್ತಿ ಬಗ್ಗೆ ಈ ಮೊದಲೇ ಎಲ್ಲ ಅಗತ್ಯ ದಾಖಲೆಗಳನ್ನು ನೀಡಿದ್ದಾಗಿ ತಿಳಿಸಿದ್ದಾರೆ. 

ಈ ದಾಳಿಗಳಿಂದ ನನಗೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ. ಇಡಿ ಮತ್ತು ಆದಾಯ ತೆರಿಗೆ ಅಧಿಕಾರಿಗಳಿಗೆ ದಾಖಲೆ ಕೊಟ್ಟಿದ್ದೇನೆ. ಆದರೆ ಪ್ರತಿಬಾರಿ ನನ್ನ ಮೇಲೆ ಮಾತ್ರ ಯಾಕೆ ಹೀಗೆ ದಾಳಿಗಳಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.



Post a Comment

أحدث أقدم