ಕಳಪೆ ಕಾಮಗಾರಿ ಹಾಗೂ ಸೇತುವೆ ನಿರ್ವಹಣೆ ಮಾಡದೆ ತೀವ್ರ ಟೀಕೆಗೆ ಗುರಿಯಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಇದೀಗ ಎರಡು ವರ್ಷಗಳಲ್ಲಿ ಎರಡನೇ ಬಾರಿಗೆ ಕುಸಿದಿರುವ ಸುಮನಹಳ್ಳಿ ಸೇತುವೆಯ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಂಡಿದೆ.
ಸೇತುವೆ ಕಾಮಗಾರಿಬೆಂಗಳೂರು: ಕಳಪೆ ಕಾಮಗಾರಿ ಹಾಗೂ ಸೇತುವೆ ನಿರ್ವಹಣೆ ಮಾಡದೆ ತೀವ್ರ ಟೀಕೆಗೆ ಗುರಿಯಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಇದೀಗ ಎರಡು ವರ್ಷಗಳಲ್ಲಿ ಎರಡನೇ ಬಾರಿಗೆ ಕುಸಿದಿರುವ ಸುಮನಹಳ್ಳಿ ಸೇತುವೆಯ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಂಡಿದೆ.
ನಿರ್ವಹಣೆ ಕೊರತೆ ಹಾಗೂ ಅತಿವೃಷ್ಟಿಯಿಂದ ಹಾನಿಯಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಈಗ ಒಡೆದು ಹೋಗಿರುವ ಸ್ಲ್ಯಾಬ್‌ಗಳನ್ನು ತೆಗೆದು ಕಬ್ಬಿಣದ ಸರಳುಗಳನ್ನು ಜೋಡಿಸುವ ಕಾರ್ಯವನ್ನು ಕೈಗೆತ್ತಿಕೊಂಡಿದೆ. ಟ್ರಾಫಿಕ್ ಜಾಮ್ ಆಗದಂತೆ ನೋಡಿಕೊಳ್ಳಲು ಆ ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಕಾಮಗಾರಿ ಪೂರ್ಣಗೊಳ್ಳಲು 60 ರಿಂದ 80 ದಿನ ಬೇಕಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಾನಿಗೀಡಾದ ಭಾಗದ ಸುತ್ತ ಸಂಪೂರ್ಣ ಸ್ಲ್ಯಾಬ್ ಕತ್ತರಿಸಿ, ಮತ್ತೆ ಕಬ್ಬಿಣದ ಸರಳುಗಳನ್ನು ಜೋಡಿಸಿ ಕಾಂಕ್ರೀಟ್ ಹಾಕಿ ದುರಸ್ತಿ ಮಾಡುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ನವೆಂಬರ್ ಅಂತ್ಯ ಮತ್ತು ಡಿಸೆಂಬರ್ ಮೊದಲ ವಾರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಎರಡು ದಿನಗಳ ಹಿಂದೆ ಸುಮಾರು 9 ಚದರ ಅಡಿ ಗುಂಡಿ ಪತ್ತೆಯಾಗಿದ್ದು ಇದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಇಂಜಿನಿಯರ್ ಇನ್ ಚೀಫ್ ಬಿ ಎಸ್ ಪ್ರಹ್ಲಾದ್ ಅವರು ಮಾತನಾಡಿ, 2004-06ರಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ನಿರ್ಮಿಸಿದ ಮೇಲ್ಸೇತುವೆಯನ್ನು 2014-15ರಲ್ಲಿ ಬಿಬಿಎಂಪಿಗೆ ಹಸ್ತಾಂತರಿಸಲಾಗಿತ್ತು. ಆದರೆ ನಿರ್ಲಕ್ಷ್ಯ ಹಾಗೂ ನಿರ್ವಹಣೆಯ ಕೊರತೆಯಿಂದ ಫ್ಲೈಓವರ್ ಮೇಲೆ ಪದೇ ಪದೇ ಬಿರುಕು ಬಿಡುತ್ತಿವೆ ಎಂದು ಹೇಳಿದ್ದಾರೆ.
ಎರಡು ವರ್ಷಗಳ ಹಿಂದೆ 2019ರ ನವೆಂಬರ್‌ನಲ್ಲಿ ಇದೇ ಮೇಲ್ಸೇತುವೆಯಲ್ಲಿ ರಂಧ್ರ ಪತ್ತೆಯಾಗಿದ್ದು, ದುರಸ್ತಿ ಕಾರ್ಯದ ಕಾರಣ ಸುಮನಹಳ್ಳಿ ಜಂಕ್ಷನ್, ಕಂಠೀರವ ನಗರ ಮತ್ತು ಕೊಟ್ಟಿಗೆಪಾಳ್ಯ ಬಳಿ ಸಂಚಾರ ಸ್ಥಗಿತಗೊಂಡಿತ್ತು.
Post a Comment