ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಅಕ್ಟೋಬರ್ ತಿಂಗಳ ಚೆಕ್ಗಳಿಗೆ ಸಹಿ ಹಾಕಲು ಹೈಕೋರ್ಟ್...
ಮುರುಘಾ ಶ್ರೀಬೆಂಗಳೂರು: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಅಕ್ಟೋಬರ್ ತಿಂಗಳ ಚೆಕ್ಗಳಿಗೆ ಸಹಿ ಹಾಕಲು ಹೈಕೋರ್ಟ್ ಶುಕ್ರವಾರ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ವೇತನಕ್ಕಾಗಿ ಕಾಯುತ್ತಿದ್ದ ಮಠದ ಮೂರು ಸಾವಿರ ಸಿಬ್ಬಂದಿ ಸದ್ಯಕ್ಕೆ ನಿಟ್ಟುಸಿರುಬಿಟ್ಟಿದ್ದಾರೆ.
ಮಠದ ಸಿಬ್ಬಂದಿಗೆ ವೇತನ ಮತ್ತು ಇತರೆ ದೈನಂದಿನ ವೆಚ್ಚಗಳಿಗೆ ಸಂಬಂಧಿಸಿದ ಚೆಕ್ ಗಳಿಗೆ ಸಹಿ ಮಾಡಲು ಅನುಮತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿದೆ.
ಮುರುಘಾ ಶ್ರೀಗಳು ವೇತನಕ್ಕೆ ಸಂಬಂಧಿಸಿದ ಚೆಕ್ಗಳಿಗೆ ಮಾತ್ರ ಸಹಿ ಹಾಕಬೇಕು. ಸಹಿ ಪಡೆಯಲು ಚಿತ್ರದುರ್ಗ ಸೆಂಟ್ರಲ್ ಜೈಲಿನ ಅಧಿಕಾರಿಗಳು ಸಂಬಂಧಪಟ್ಟವರಿಗೆ ಅನುಮತಿ ನೀಡಬೇಕು. ಸಹಿ ಹಾಕುವ ವೇಳೆ ತನಿಖಾಧಿಕಾರಿ, ಜೈಲು ಅಧೀಕ್ಷಕರು ಉಪಸ್ಥಿತರಿರಬೇಕು ಎಂದು ಹೈಕೋರ್ಟ್ ಹೇಳಿದೆ.
ಅಕ್ಟೋಬರ್ ತಿಂಗಳಿಗೆ ಮಾತ್ರ ಈ ಆದೇಶ ಅನ್ವಯ. ವೇತನವಿಲ್ಲದೆ ವಿದ್ಯಾಪೀಠದ ಸಿಬ್ಬಂದಿ ಉಪವಾಸ ಇರಬಾರದು ಎಂದು ಮಾನವೀಯ ನೆಲೆಗಟ್ಟಿನಲ್ಲಿ ಅನುಮತಿಸಲಾಗಿದೆ. ಇನ್ನಿತರ ಮನವಿಗಳ ಬಗ್ಗೆ ವಿಚಾರಣಾ ನ್ಯಾಯಾಲಯವೇ ನಿರ್ಧರಿಸಬೇಕು ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
إرسال تعليق