ಇತ್ತೀಚಿಗೆ ಮೂಲಸೌಕರ್ಯಗಳ ನಿರ್ಲಕ್ಷ್ಯದಿಂದ ಬ್ರ್ಯಾಂಡ್ ಬೆಂಗಳೂರು ಖ್ಯಾತಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದ್ದ ಇನ್ಫೋಸಿಸ್ ನ ಮಾಜಿ ನಿರ್ದೇಶಕ ಟಿವಿ ಮೋಹನ್ ದಾಸ್ ಪೈ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು.
ಸಿಎಂ ಬೊಮ್ಮಾಯಿ, ಮೋಹನ್ ದಾಸ್ ಪೈಬೆಂಗಳೂರು: ಇತ್ತೀಚಿಗೆ ಮೂಲಸೌಕರ್ಯಗಳ ನಿರ್ಲಕ್ಷ್ಯದಿಂದ ಬ್ರ್ಯಾಂಡ್ ಬೆಂಗಳೂರು ಖ್ಯಾತಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದ್ದ ಇನ್ಫೋಸಿಸ್ ನ ಮಾಜಿ ನಿರ್ದೇಶಕ ಟಿವಿ ಮೋಹನ್ ದಾಸ್ ಪೈ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು.
30 ನಿಮಿಷಗಳ ಚರ್ಚೆಯಲ್ಲಿ ಬೆಂಗಳೂರಿಗೆ ಪರ್ಯಾಯವಾಗಿ ಹುಬ್ಬಳ್ಳಿ- ಧಾರವಾಡವನ್ನು ಟೆಕ್ ಹಬ್ ಆಗಿ ಅಭಿವೃದ್ಧಿಪಡಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಈ ಪ್ರದೇಶ ಎಲೆಕ್ಟ್ರಿಕಲ್ ವಾಹನ ತಯಾರಿಕಾ ಕೇಂದ್ರವಾಗುವ ಸಾಮರ್ಥ್ಯವನ್ನು ಹೊಂದಿದೆ ಎಂದು ಪೈ ಬೊಮ್ಮಾಯಿ ಅವರಿಗೆ ತಿಳಿಸಿದರು ಮತ್ತು ಅದರ ಬಗ್ಗೆ ಹೇಗೆ ಹೋಗಬೇಕೆಂಬುದರ ಬಗ್ಗೆ ಸ್ಪಷ್ಟವಾದ ಪ್ರಸ್ತಾವನೆಯನ್ನು ಮಂಡಿಸಿದರು ಎಂದು ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿವೆ.
ಹುಬ್ಬಳ್ಳಿ-ಧಾರವಾಡಕ್ಕೆ ಹೆಚ್ಚಿನ ಹೂಡಿಕೆ ಆಕರ್ಷಿಸುವ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದ್ದು, ಬೊಮ್ಮಾಯಿ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು ಎಂದು ಮೂಲಗಳು ಹೇಳಿವೆ. ಇತ್ತೀಚೆಗೆ ಹುಬ್ಬಳ್ಳಿ-ಧಾರವಾಡಕ್ಕೆ ಪೈ ಭೇಟಿ ನೀಡಿದ್ದು, ಆ ಪ್ರವಾಸದ ಫಲವಾಗಿ ಈ ಸಭೆ ನಡೆದಿದೆ. ಮೋಹನ್ ದಾಸ್ ಪೈ ಇನ್ಫೋಸಿಸ್‌ನಲ್ಲಿದ್ದ ದಿನಗಳಿಂದಲೂ ಉತ್ತರ ಕರ್ನಾಟಕ ಪ್ರದೇಶವನ್ನು ಅಭಿವೃದ್ಧಿಪಡಿಸಲು ಲಾಬಿ ಮಾಡುತ್ತಿದ್ದಾರೆ. ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ ಕೂಡ ಈ ಪ್ರದೇಶದವರು. ವಾಸ್ತವವಾಗಿ, ಇನ್ಫೋಸಿಸ್ ತನ್ನ ಹುಬ್ಬಳ್ಳಿ ಕ್ಯಾಂಪಸ್‌ನಿಂದ ಆಗಸ್ಟ್ 1 ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಿತು.
إرسال تعليق