ಭ್ರಷ್ಟಾಚಾರ ಆರೋಪ ಪ್ರಕರಣದ ಮರುವಿಚಾರಣೆಗೆ ಹೈಕೋರ್ಟ್ ಆದೇಶ : ಬಿಎಸ್ ಯಡಿಯೂರಪ್ಪಗೆ ಸಂಕಷ್ಟ

 ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.

                            ಬಿಎಸ್ ಯಡಿಯೂರಪ್ಪ
By : Rekha.M
Online Desk

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. 

2021ರ ಜುಲೈ 8ರಂದು ವಿಶೇಷ ನ್ಯಾಯಾಲಯವು ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಸಲ್ಲಿಸಿದ್ದ ಅರ್ಜಿಯನ್ನು ಅಂಗೀಕರಿಸಿರುವ ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ಅವರು ಈ ಆದೇಶವನ್ನು ನೀಡಿದ್ದಾರೆ.

ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಹಾಗೂ ಅವರ ಕುಟುಂಬದ ಕೆಲ ಸದಸ್ಯರು ಹಾಗೂ ಸಚಿವ ಎಸ್.ಟಿ.ಸೋಮಶೇಖರ್ ಸೇರಿದಂತೆ ಒಂಬತ್ತು ಜನರ ವಿರುದ್ಧದ ಅಪರಾಧಗಳ ವಿಚಾರಣೆಗೆ ಅಥವಾ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೂಲಕ ಯೋಜನೆ ನೀಡಲು ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪನಿ ಪ್ರೈವೇಟ್ ಲಿಮಿಟೆಡ್‌ ನಿಂದ 12.5 ಕೋಟಿ ರೂಪಾಯಿ ಲಂಚ ಪಡೆದ ಆರೋಪದ ಕುರಿತು ತನಿಖೆಗೆ ಆದೇಶಿಸುವಂತೆ ಅಬ್ರಹಾಂ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು.

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಪೂರ್ವಾನುಮತಿ ನಿರಾಕರಣೆ ಹಿನ್ನಲೆಯಲ್ಲಿ ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಹೀಗಾಗಿ ಟಿಜೆ ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.






Post a Comment

أحدث أقدم