ಈಜಲು ಹೋಗಿದ್ದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ರಾಮನಗರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಸಂಗ್ರಹ ಚಿತ್ರ
ರಾಮನಗರ: ಈಜಲು ಹೋಗಿದ್ದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ರಾಮನಗರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ರಾಮನಗರ ಜಿಲ್ಲೆಯ ಕನಕಪುರದ ಮಾವತ್ತೂರು ಕೆರೆಯಲ್ಲಿ ಮಂಗಳವಾರ ಈ ದುರಂತ ನಡೆದಿದ್ದು, ನಾಪತ್ತೆಯಾದವರನ್ನು ಸಚಿನ್ (26 ವರ್ಷ),ಜಾವೀದ್ ಅಹಮದ್ ಮುಲ್ಲಾ(26ವರ್ಷ), ನಿರಂಜನ್(26ವರ್ಷ) ಎಂದು ಗುರುತಿಸಲಾಗಿದೆ.
ನಾಪತ್ತೆಯಾದ ಎಲ್ಲ ವಿದ್ಯಾರ್ಥಿಗಳು ಕೆರೆ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು, ಮೂವರು ದಯಾನಂದ ಸಾಗರ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆಸೋಮವಾರ ಮಧ್ಯಾಹ್ನ ಕಾಲೇಜಿನಿಂದ ವಿದ್ಯಾರ್ಥಿಗಳು ಹೊರಹೋಗಿದ್ದರು. ಬಳಿಕ ರಾಮನಗರದ ಕನಕಪುರದ ಮಾವತ್ತೂರು ಕೆರೆಗೆ ತೆರಳಿದ್ದಾರೆ ಎನ್ನಲಾಗಿದೆ. ಬಳಿಕ ಈಜಲು ಹೋಗಿ ನಾಪತ್ತೆಯಾಗಿದ್ದಾರೆ.
ಮಾವತ್ತೂರು ಕೆರೆ ಬಳಿ ಬೈಕ್ ಪತ್ತೆಯಾಗಿದ್ದು, ನಾಪತ್ತೆಯಾದ ವಿದ್ಯಾರ್ಥಿಗಳಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ಆರಂಭಿಸಿದ್ದಾರೆ. ಈ ಸಂಬಂಧ ಕನಕಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق