ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ 2,797 ಹೊಸ ಪ್ರಕರಣ, 24 ಮಂದಿ ಸಾವು

 ಸದ್ಯ ದೇಶದಲ್ಲಿ 29,251 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,40,51,228 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

            ಕೊರೋನಾ ವೈರಸ್ (ಸಂಗ್ರಹ ಚಿತ್ರ)

By : Rekha.M
Online Desk

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ 2,797 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,09,257ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ 98.75ರಷ್ಟಿದೆ ಎಂದು ಸಚಿವಾಲಯ ಶನಿವಾರ ತಿಳಿಸಿದೆ.

 ಸದ್ಯ ದೇಶದಲ್ಲಿ 29,251 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,40,51,228 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳದಲ್ಲಿ 12 ಮಂದಿ ಸೇರಿದಂತೆ ದೇಶದಾದ್ಯಂತ 24 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಈ ಮೂಲಕ ಈವರೆಗೆ 5,28,778 ಜನರು ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.07ರಷ್ಟು ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 1.05ರಷ್ಟಿದೆ.

ಸದ್ಯ ದೇಶದಲ್ಲಿ ಅಕ್ಟೋಬರ್ 7ಕ್ಕೆ ಕೊನೆಗೊಂಡಂತೆ 2,66,839 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ 89,67,48,226 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.


Post a Comment

Previous Post Next Post