ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಡಿ .ಕೆ ಸುರೇಶ್ ಅವರಿಗೆ ಅ.7ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
ಡಿ.ಕೆ ಸುರೇಶ್ ಮತ್ತು ಡಿ.ಕೆ ಶಿವಕುಮಾರ್ಬೆಂಗಳೂರು:ಕಾಂಗ್ರೆಸ್ನ ಪ್ರಭಾವಿ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸದ್ಯ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ರಾಜ್ಯದಲ್ಲಿ ಯಶಸ್ವಿಯಾಗಿಸುವ ಜವಾಬ್ದಾರಿ ಹೊತ್ತಿದ್ದಾರೆ. ಸದ್ಯ ಭಾರತ್ ಜೋಡೋ ಯಾತ್ರೆಯಲ್ಲಿ ಫುಲ್ ಬ್ಯುಸಿಯಾಗಿರುವ ಡಿಕೆ ಶಿವಕುಮಾರ್ಗೆ ನಿರ್ದೇಶನಾಯಲಯ (ಇ.ಡಿ)ವೂ ಶಾಕ್ ಕೊಟ್ಟಿದೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಡಿ .ಕೆ ಸುರೇಶ್ ಅವರಿಗೆ ಅ.7ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ನ್ಯಾಷನಲ್ ಹೆರಾಲ್ಡ್ ಕೇಸ್ನಲ್ಲೂ ಜಾರಿ ನಿರ್ದೇಶನಾಲಯ ಡಿಕೆ ಬದ್ರರ್ಸ್ಗೆ ಬಲೆ ಬೀಸಿದೆ. ಯಂಗ್ ಇಂಡಿಯಾ, ನ್ಯಾಷನಲ್ ಹೆರಾಲ್ಡ್‌ಗೆ ಡಿಕೆ ಶಿವಕುಮಾರ್ ದೇಣಿಗೆ ನೀಡಿದ್ದಾರೆ. ಅದೇ ವಿಚಾರವಾಗಿ ಇ.ಡಿ ಸಮನ್ಸ್ ಬಂದಿದೆ. ಡಿ.ಕೆ.ಶಿವಕುಮಾರ್ ಜೊತೆಯಲ್ಲಿ ಅವರ ಸೋದರ, ಸಂಸದ ಡಿ.ಕೆ.ಸುರೇಶ್ ಅವರಿಗೂ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಲ್ಲಿ ಉಂಟಾಗಿದೆ ಎಂದು ಆರೋಪಿಸಲಾಗಿರುವ ಅಕ್ರಮ ಹಣಕಾಸು ವರ್ಗಾವಣೆಗೆ ಸಂಬಂಧಿಸಿದಂತೆ ಈ ವಿಚಾರಣೆ ನಡೆಯಲಿದೆ ಎಂದು ಇ.ಡಿ.ಮೂಲಗಳು ಭಾನುವಾರ ತಿಳಿಸಿವೆ.
ಶಿವಕುಮಾರ್ ಅವರನ್ನು ಸೆ.7ರಂದು ಅಕ್ರಮ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇ.ಡಿ. ವಿಚಾರಣೆ ನಡೆಸಿತ್ತು. ಕರ್ನಾಟಕದಲ್ಲಿ ವಯನಾಡ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿರುವಂತೆಯೇ ಈ ಬೆಳವಣಿಗೆ ನಡೆದಿದೆ.
ಹಲವು ರಾಜಕಾರಣಿಗಳ ವಿರುದ್ಧ ಪ್ರತ್ಯೇಕ ಆಸ್ತಿ ಪ್ರಕರಣಗಳು ದಾಖಲಾಗಿವೆ. ಇತರರ ತನಿಖೆಗೆ ಎಸಿಬಿಗೆ ಸರ್ಕಾರ ಅನುಮತಿ ನೀಡಿದ್ದರೂ, ನನ್ನ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಹೇಳಿದೆ. ನಾನು ಚುನಾವಣೆ ಮತ್ತು ಇತರ ಪಕ್ಷದ ಕಾರ್ಯಕ್ರಮಗಳಲ್ಲಿ ನಿರತನಾಗಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು.
إرسال تعليق