ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಲ್ಲಿ 3 ಐಇಡಿಗಳಿದ್ದ ಬ್ಯಾಗ್ ಪತ್ತೆ, ತಪ್ಪಿದ ಭಾರಿ ಅನಾಹುತ

 ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಅರಣ್ಯ ಪ್ರದೇಶದಿಂದ ಬ್ಯಾಗ್‌ನಲ್ಲಿ ಮೂರು ಶಕ್ತಿಶಾಲಿ ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಪತ್ತೆ ಮಾಡಿದ್ದು, ಭಾರಿ ದುರಂತವೊಂದನ್ನು ತಪ್ಪಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

               ಸಾಂದರ್ಭಿಕ ಚಿತ್ರ
By : Rekha.M

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಅರಣ್ಯ ಪ್ರದೇಶದಿಂದ ಬ್ಯಾಗ್‌ನಲ್ಲಿ ಮೂರು ಶಕ್ತಿಶಾಲಿ ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಪತ್ತೆ ಮಾಡಿದ್ದು, ಭಾರಿ ದುರಂತವೊಂದನ್ನು ತಪ್ಪಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬುಧವಾರ ತಡರಾತ್ರಿ ಸೇನೆ ಮತ್ತು ಪೊಲೀಸರ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಗೂಲ್ ಉಪವಿಭಾಗದ ಸಂಗಲ್ದನ್ ಅರಣ್ಯದಲ್ಲಿ ಚೀಲ ಬಿದ್ದಿರುವುದನ್ನು ತಂಡ ಪತ್ತೆಮಾಡಿದೆ ಎಂದು ಅವರು ತಿಳಿಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಕೆಲವರ ಅನುಮಾನಾಸ್ಪದ ಚಲನವಲನದ ಹಿನ್ನೆಲೆಯಲ್ಲಿ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯ ಸಂದರ್ಭದಲ್ಲಿ ಯಾರನ್ನೂ ಬಂಧಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳವು ಬ್ಯಾಗ್‌ನಲ್ಲಿ ಮೂರು ಐಇಡಿಗಳು ಇರುವುದನ್ನು ಖಚಿತಪಡಿಸಿದೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ದಾಳಿ ನಡೆಸಲು ಯೋಜಿಸಿರುವ ಶಂಕಿತ ಭಯೋತ್ಪಾದಕರು ಈ ಬ್ಯಾಗುಗಳನ್ನು ಇಟ್ಟಿರುವುದಾಗಿ ಶಂಕಿಸಲಾಗಿದ್ದು, ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Post a Comment

Previous Post Next Post