ಗ್ರಾಹಕರಿಗೆ ಮತ್ತೊಂದು ಬರೆ: ನಂದಿನಿ ಹಾಲಿನ ದರ ಶೀಘ್ರವೇ ಲೀ.ಗೆ 3 ರು. ಹೆಚ್ಚಳ; ಬಾಲಚಂದ್ರ ಜಾರಕಿಹೊಳಿ

 ಶೀಘ್ರವೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿ ಪ್ರತಿ ಲೀಟರ್‌ ಹಾಲಿಗೆ 3 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

                    ಬಾಲಚಂದ್ರ ಜಾರಕಿಹೊಳಿ

By : Rekha.M
Online Desk

ಬೆಳಗಾವಿ: ಶೀಘ್ರವೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿ ಪ್ರತಿ ಲೀಟರ್‌ ಹಾಲಿಗೆ 3 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಭಾನುವಾರ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಿಂದ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿಕ್ರಾಸ್‌ನಲ್ಲಿ .10 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿಶಿಥಲೀಕರಣ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಂದಿನಿ ಹಾಲಿನ ದರ ಪರಿಷ್ಕರಣೆ ಹಣ ಸಂಪೂರ್ಣವಾಗಿ ರೈತರಿಗೆ ಸಂದಾಯವಾಗಲಿದೆ ಎಂದರು.

ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್‌ಗೆ ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವ ಸಲ್ಲಿಸಿವೆ. ರೈತರ ಹೈನುಗಾರಿಕೆ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ. ಹಾಲಿನ ದರ ಪರಿಷ್ಕರಣೆ ಸಂಬಂಧ ಈಗಾಗಲೇ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಹೂಲಿಕಟ್ಟಿಶಿಥಲೀಕರಣ ಕೇಂದ್ರಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮನ ಹೆಸರು ನಾಮಕರಣ ಮಾಡಲಾಗುವುದು ಎಂದು ಭರವಸೆ ನೀಡಿದ ಅವರು, ಹೂಲಿಕಟ್ಟಿಶಿಥಲೀಕರಣ ಕೇಂದ್ರದ 30 ಸಾವಿರ ಲೀಟರ್‌ ಹಾಲು ಶೇಖರಣೆ ಸಾಮರ್ಥ್ಯ ಹೊಂದಿದೆ. 5 ಎಕರೆ ಜಾಗಯಲ್ಲಿ .10 ಕೋಟಿ ವೆಚ್ಚದಲ್ಲಿ ಈ ಕೇಂದ್ರವನ್ನು ನಿರ್ಮಿಸಲಾಗುವುದು. ಇದಕ್ಕೆ ಕೆಎಂಎಫ್‌ ಮತ್ತು ಜಿಲ್ಲಾ ಹಾಲು ಒಕ್ಕೂಟದಿಂದ ತಲಾ .5 ಕೋಟಿ ವೆಚ್ಚ ಭರಿಸಲಾಗಿದೆ  ಎಂದು ವಿವರ ನೀಡಿದರು.


    Post a Comment

    أحدث أقدم