5,8 ತರಗತಿಗಳಿಗೆ ಬೋರ್ಡ್ ಪರೀಕ್ಷೆ ಇಲ್ಲ, ಕೇವಲ ಮೌಲ್ಯಮಾಪನ: ಕರ್ನಾಟಕ ಶಾಲಾ ಶಿಕ್ಷಣ ಸಚಿವರು

 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ವಿಚಾರದಲ್ಲಿ ಭಾನುವಾರ ಸ್ಪಷ್ಟನೆ ನೀಡಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಅವರು ಮೌಲ್ಯಮಾಪನದಂತೆಯೇ ಇರುತ್ತದೆ ಎಂದು ಹೇಳಿದ್ದಾರೆ.

              ಬಿ.ಸಿ ನಾಗೇಶ್

By : Rekha.M
Online Desk

ಬೆಂಗಳೂರು: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ವಿಚಾರದಲ್ಲಿ ಭಾನುವಾರ ಸ್ಪಷ್ಟನೆ ನೀಡಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಅವರು ಮೌಲ್ಯಮಾಪನದಂತೆಯೇ ಇರುತ್ತದೆ ಎಂದು ಹೇಳಿದ್ದಾರೆ.

 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್​ ಎಕ್ಸಾಂ ನಡೆಸುವ ಕುರಿತು ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಭಾನುವಾರ ಸ್ಪಷ್ಟನೆ ನೀಡಿದ್ದು, ಪರೀಕ್ಷೆಗಳು ಮೌಲ್ಯಮಾಪನದಂತೆಯೇ ಇರಲಿದೆ ಎಂದು ಹೇಳಿದ್ದಾರೆ.

'ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಸರ್ಕಾರ ಪಬ್ಲಿಕ್ ಪರೀಕ್ಷೆ ನಡೆಸುವ ಚಿಂತನೆಯನ್ನು ಕೈ ಬಿಟ್ಟಿದೆ. 5 ಮತ್ತು 8ನೇ ಕ್ಲಾಸ್ ಮಕ್ಕಳಿಗೆ ಎಸ್​ಎಸ್​ಎಲ್​ಸಿ ಮಾದರಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವ ಉದ್ದೇಶವನ್ನು ಸರ್ಕಾರ ಹೊಂದಿಲ್ಲ. ಆದ್ರೆ ಪರ್ಯಾಯ  ಮಾದರಿಯಲ್ಲಿ ಪರೀಕ್ಷೆ ನಡೆಸುವ ಚಿಂತನೆಗಳು ನಡೆದಿವೆ ಎಂದು ತಿಳಿಸಿದರು.

ಆojz ಈ ಪರ್ಯಾಯ ಪರೀಕ್ಷೆ SSLC ಮಾದರಿಯ ಬೋರ್ಡ್​ ಪರೀಕ್ಷೆ ಆಗಿರಲ್ಲ. ಈ ಸಂಬಂಧ ಅಕ್ಟೋಬರ್ 13ರಂದು ನಡೆಯುವ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಪರೀಕ್ಷೆ ನಡೆಸುವ ಕ್ರಮ ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಒಂದು ಭಾಗವಾಗಿದೆ ಎಂದು ಹೇಳಲಾಗುತ್ತಿದೆ. 5+3-3+4 ಶಿಕ್ಷಣ ವ್ಯವಸ್ಥೆಯ ಭಾಗವಾಗಿದೆ. ಪರೀಕ್ಷೆಯ ಮೂಲಕ ಮಕ್ಕಳ ಶೈಕ್ಷಣಿಕ ಗುಣಮಟ್ಟ ಮೌಲ್ಯಮಾಪನ ಮಾಡಲು ಸಹಾಯ ಆಗಲಿದೆ. ಈ ಚರ್ಚೆಗಳು ಆರಂಭಿಕ ಹಂತದಲ್ಲಿವೆ. ಯೋಜನೆ ಅನುಷ್ಠಾನ ಮತ್ತು ಮೌಲ್ಯಮಾಪನ ಹೇಗೆ ಮಾಡಬೇಕು ಎಂಬುದರ ಬಗ್ಗೆ ಯಾವುದೇ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಮೌಲ್ಯಮಾಪನದಲ್ಲಿ ಏಕರೂಪತೆ ಮಾಡಿಕೊಳ್ಳಲು ಇದು ಸಹಕಾರಿಯಾಗಲಿದೆ ಎಂದು ನಾಗೇಶ್ ಮಾಹಿತಿ ನೀಡಿದರು.

ಏತನ್ಮಧ್ಯೆ, ಈ ಕ್ರಮವು ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಭಾಗವಾಗಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿದ್ದು, “5+3+3+4 ಶಿಕ್ಷಣ ವ್ಯವಸ್ಥೆಯ ಭಾಗವಾಗಿ, ನಾವು ಮೌಲ್ಯಮಾಪನ ವಿಧಾನವನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದೇವೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಕಲಿಕೆಯಲ್ಲಿ ಹೇಗೆ ಮೇಲುಗೈ ಸಾಧಿಸುತ್ತಿದ್ದಾರೆ ಎಂಬುದನ್ನು ನಾವು ನಿರ್ಣಯಿಸಬಹುದು. ಇದು ನೋ ಡಿಟೆನ್ಶನ್ ನೀತಿಗೆ ವಿರುದ್ಧವಾಗಿದೆ, ಅಲ್ಲಿ ವಿದ್ಯಾರ್ಥಿಗಳು ತಮ್ಮ ತರಗತಿಗಳಲ್ಲಿ ಹೇಗೆ ಮಾಡುತ್ತಿದ್ದಾರೆ ಮತ್ತು ಅವರಿಗೆ ಸಹಾಯ ಮಾಡಲು ಏನು ಮಾಡಬಹುದು ಎಂಬುದರ ಬಗ್ಗೆ ಯಾವುದೇ ಗಮನವಿಲ್ಲದೆ ಉತ್ತೀರ್ಣರಾಗುತ್ತಾರೆ ಎಂದು ಅವರು ತಿಳಿಸಿದರು.

ಈ ಬಾರಿ 5 ಮತ್ತು 8ನೇ ತರಗತಿಯ ಮಕ್ಕಳಿಗೆ SSLC ಮಾದರಿಯಲ್ಲಿ ಬೋರ್ಡ್​ ಪರೀಕ್ಷೆಯ ಕುರಿತು ಸರ್ಕಾರ ಚಿಂತನೆ ನಡೆಸಿತ್ತು. ಆದ್ರೆ ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. 

Post a Comment

Previous Post Next Post