ಮನೆ ಮೇಲೆ ಪಾಕ್ ಧ್ವಜ ಹಾರಾಟ: ವ್ಯಕ್ತಿಯ ಬಂಧನ

 ಸಾರಂಗಢ-ಭಿಲೈಗಢ ಜಿಲ್ಲೆಯಲ್ಲಿ ಪಾಕಿಸ್ತಾನದ ರಾಷ್ಟ್ರಧ್ವಜವನ್ನು ತನ್ನ ಮನೆ ಮೇಲೆ ಹಾರಿಸಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

                        ಪಾಕ್ ರಾಷ್ಟ್ರ ಧ್ವಜ

By : Rekha.M
Online Desk

ಛತ್ತೀಸ್‌ಗಢ: ಸಾರಂಗಢ-ಭಿಲೈಗಢ ಜಿಲ್ಲೆಯಲ್ಲಿ ಪಾಕಿಸ್ತಾನದ ರಾಷ್ಟ್ರಧ್ವಜವನ್ನು ತನ್ನ ಮನೆ ಮೇಲೆ ಹಾರಿಸಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಸರಿಯಾ ಪಟ್ಟಣದ ಅಟಲ್ ಚೌಕ್ ಪ್ರದೇಶದಲ್ಲಿನ ಮನೆ ಮೇಲೆ ಪಾಕಿಸ್ತಾನದ ಧ್ವಜವನ್ನು ಹಾರಿಸಲಾಗಿದೆ ಎಂದು ಪೊಲೀಸರು ದೂರು ಸ್ವೀಕರಿಸಿದ ನಂತರ ಹಣ್ಣಿನ ಮಾರಾಟಗಾರ ಮುಸ್ತಾಕ್ ಖಾನ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಂತರ ಪೊಲೀಸ್ ತಂಡ ಪಾಕ್ ಧ್ವಜವನ್ನು ತೆಗೆದಿದ್ದು, ಅದನ್ನು ವಶಪಡಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.   ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಧರ್ಮ, ಜನಾಂಗ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕೆಲವು ಸ್ಥಳೀಯ ಬಿಜೆಪಿ ಮುಖಂಡರು ರಿಯಾ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿ, ಪಾಕ್ ರಾಷ್ಟ್ರ ಧ್ವಜ ಹಾರಾಟ ನಡೆಸಿದ ವ್ಯಕ್ತಿ ವಿರುದ್ಧ ದೇಶದ್ರೋಹದ ಆರೋಪದ ಮೇಲೆ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.




Post a Comment

أحدث أقدم