ಬಿಬಿಎಂಪಿ ವ್ಯಾಪ್ತಿಯಲ್ಲಿನ ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸದಿದ್ದರೆ ಅದರ ಮುಖ್ಯ ಆಯುಕ್ತರ ವಿರುದ್ಧ ಸೂಕ್ತ ಆದೇಶ ಹೊರಡಿಸಲಾಗುವುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಹೈಕೋರ್ಟ್ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸದಿದ್ದರೆ ಅದರ ಮುಖ್ಯ ಆಯುಕ್ತರ ವಿರುದ್ಧ ಸೂಕ್ತ ಆದೇಶ ಹೊರಡಿಸಲಾಗುವುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.
ರಸ್ತೆ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ನಾಲ್ವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಾಧೀಶ ಅಲೋಕ್ ಅರಾಧೆ ನೇತೃತ್ವದ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು. ಇದೇ ವರ್ಷದ ಸೆಪ್ಟೆಂಬರ್ 19 ರವರೆಗೂ 10 ರಾಜ ಕಾಲುವೆಗಳ ಒತ್ತುವರಿಯನ್ನು ತೆರವುಗೊಳಿಸಲಾಗಿದೆ ಎಂಬ ವರದಿಯ್ನು ಬಿಬಿಎಂಪಿ ಪರ ವಕೀಲರು ನ್ಯಾಯಲಯಕ್ಕೆ ಸಲ್ಲಿಸಿದರು.
ಇನ್ನೂ ರಾಜಕಾಲುವೆಗಳ ಮೇಲಿನ 592 ಒತ್ತುವರಿಯನ್ನು ತೆರವುಗೊಳಿಸಬೇಕಾದ ಅಗತ್ಯವಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ 221 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಇದೇ ವೇಳೆ ಸಲ್ಲಿಸಿದ ವರದಿಯಲ್ಲಿ ಹೇಳಲಾಯಿತು. ಮಹದೇವಪುರ ವಲಯದ (324 ಕಿ.ಮೀ.) ರಸ್ತೆಗಳನ್ನು ಮರು ಡಾಂಬರೀಕರಣ ಮಾಡಲಾಗುತ್ತಿದ್ದು, 427 ಕಿ.ಮೀ ರಸ್ತೆಗಳ ಕಾಮಗಾರಿ ಆರಂಭವಾಗಿದೆ ಎಂದು ತಿಳಿಸಿದರು.
ವರದಿಯು ತೃಪ್ತಿಕರವಾಗಿ ಕಾಣುತ್ತಿಲ್ಲ ಎಂದು ಹೇಳಿದ ನ್ಯಾಯಪೀಠ, ಬಿಬಿಎಂಪಿ ಈ ವಿಷಯದಲ್ಲಿ ಪ್ರಗತಿಯನ್ನು ತೋರಿಸದಿದ್ದರೆ, ಎಂಜಿನಿಯರ್‌ಗಳ ವೇತನವನ್ನು ತಡೆಹಿಡಿಯಲು ಬಿಬಿಎಂಪಿಗೆ ಆದೇಶಿಸಲಾಗುವುದು ಎಂದು ಎಚ್ಚರಿಸಿತು. ರಸ್ತೆ ಗುಂಡಿ ಮುಚ್ಚುವ ಕೆಲಸ ಸಮರ್ಪಕವಾಗಿಲ್ಲ, ವಾಹನ ಸವಾರರಿಗೆ ತೊಂದರೆಯಾಗಿದೆ ಎಂದು ನ್ಯಾಯಾಲಯ ಹೇಳಿತು. ನಂತರ ನ್ಯಾಯಾಲಯವು ಅಕ್ಟೋಬರ್ 27 ಕ್ಕೆ ಪ್ರಕರಣವನ್ನು ಮುಂದೂಡಿತು.
Post a Comment