ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ. ಪಿ ಬಿ ವರಾಳೆ

 ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ವರಾಳೆ ಅವರಿಗೆ ಪ್ರಮಾಣ ವಚನ ಬೋಧಿಸಿದರು.

                         ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕಾರ

By : Rekha.M
Online Desk

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ವರಾಳೆ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ, ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಪಿ ಎಸ್‌ ದಿನೇಶ್‌ ಕುಮಾರ್‌, ಬಿ ವೀರಪ್ಪ, ಆರ್‌ ದೇವದಾಸ್‌, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ ಗೋಪಾಲಗೌಡ, ನ್ಯಾಯಾಂಗದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಳೆದ ತಿಂಗಳು ಭಾರತದ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾ. ವರಾಳೆ ಅವರ ಪದೋನ್ನತಿಗೆ ಶಿಫಾರಸು ಮಾಡಿತ್ತು.

ನ್ಯಾಯಮೂರ್ತಿ ವರಾಳೆ ಅವರು ಆಗಸ್ಟ್ 1985ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡು ವೃತ್ತಿ ಜೀವನ ಆರಂಭಿಸಿದರು. ವಕೀಲರಾದ ಎಸ್ ಎನ್ ಲೋಯಾ ಅವರ ಬಳಿ ಆರಂಭದಲ್ಲಿ ವರಾಳೆ ಪ್ರಾಕ್ಟೀಸ್‌ ಮಾಡಿದ್ದರು. 1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಜುಲೈ 18, 2008 ರಂದು ನೇಮಕಗೊಂಡಿದ್ದರು.

ಕ್ರಿಮಿನಲ್ ಮತ್ತು ಸಿವಿಲ್ ಎರಡೂ ಕೇಸುಗಳನ್ನು ನಡೆಸಿಕೊಂಡು ಹೋಗುತ್ತಿದ್ದರು. ಔರಂಗಾಬಾದ್ ನ ಅಂಬೇಡ್ಕರ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಅಸಿಸ್ಟೆಂಟ್ ಗೌರ್ನಮೆಂಟ್ ಪ್ಲೀಡರ್ ಮತ್ತು ಅಡಿಷನಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಸೇವೆ ಸಲ್ಲಿಸಿದ್ದರು. ಬಾಂಬೆ ಹೈಕೋರ್ಟ್ ನ ಔರಂಗಾಬಾದ್ ಪೀಠದಲ್ಲಿ ಸರ್ಕಾರ ಪರವಾಗಿ ಎಎನ್ ಡಿ ಅಡಿಷನಲ್ ಸ್ಟ್ಯಾಂಡಿಂಗ್ ಕೌನ್ಸೆಲ್ ಆಗಿದ್ದರು. 




Post a Comment

أحدث أقدم