ಹಲವಾರು ವಿಳಂಬಗಳ ನಂತರ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.
ಸಾಂದರ್ಭಿಕ ಚಿತ್ರಬೆಂಗಳೂರು: ಹಲವಾರು ವಿಳಂಬಗಳ ನಂತರ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.
ವೇಳಾಪಟ್ಟಿಯ ಪ್ರಕಾರ, ಕೆಇಎ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯು ಅಕ್ಟೋಬರ್ 7 ರಂದು ಪ್ರಾರಂಭವಾಗಲಿದೆ ಮತ್ತು ಅಕ್ಟೋಬರ್ 8 ರಂದು ಕೊನೆಗೊಳ್ಳಲಿದೆ.
ಅಕ್ಟೋಬರ್ 7 ರಂದು ಕೆಇಎ ವೆಬ್‌ಸೈಟ್‌ನಲ್ಲಿ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರವನ್ನ ಪ್ರದರ್ಶಿಸುವ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳು ಅಕ್ಟೋಬರ್ 7 ರಿಂದ 10 ರ ನಡುವೆ ವೆಬ್‌ಸೈಟ್‌ನಿಂದ ಪರಿಶೀಲನೆ ಸ್ಲಿಪ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾದ ಅಭ್ಯರ್ಥಿಗಳ ಹೆಸರನ್ನು ಇಂದು ಮಧ್ಯಾಹ್ನ 1 ಗಂಟೆಯ ನಂತರ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದುತಿಳಿಸಲಾಗಿದೆ.
ನೈಜ ಸೀಟು ಹಂಚಿಕೆ ಫಲಿತಾಂಶವನ್ನು ಅಕ್ಟೋಬರ್ 17 ರಂದು ಮಧ್ಯಾಹ್ನ 2 ಗಂಟೆಯ ನಂತರ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ತಾವು ಆಯ್ಕೆಮಾಡಿದ ಕಾಲೇಜುಗಳಿಗೆ ವರದಿ ಮಾಡಿಕೊಳ್ಳು ಅಕ್ಟೋಬರ್ 22 ಕೊನೆಯ ದಿನವಾಗಿದೆಯ
Post a Comment