ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು 'ಅವರ ಗ್ಯಾಂಗ್' ಹಿಂದೂ ಮತ್ತು ಹಿಂದುತ್ವವನ್ನು ಏಕೆ ದ್ವೇಷಿಸುತ್ತಾರೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಎಎಪಿ ಮತ್ತು ಅದರ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಿರಣ್ ರಿಜಿಜುನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು 'ಅವರ ಗ್ಯಾಂಗ್' ಹಿಂದೂ ಮತ್ತು ಹಿಂದುತ್ವವನ್ನು ಏಕೆ ದ್ವೇಷಿಸುತ್ತಾರೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಎಎಪಿ ಮತ್ತು ಅದರ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯ ಸಮಾಜ ಕಲ್ಯಾಣ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ಇತ್ತೀಚೆಗೆ ಸಾಮೂಹಿಕ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಡಿಯೋ ವೈರಲ್ ಆಗಿದ್ದು, ಅಲ್ಲಿ ನೆರೆದಿದ್ದ ನೂರಾರು ಜನರು ಹಿಂದೂ ದೇವರು ಮತ್ತು ದೇವತೆಗಳನ್ನು ನಿರಾಕರಿಸುವ ಪ್ರತಿಜ್ಞೆ ಕೈಗೊಂಡಿರುವುದು ಸೆರೆಯಾಗಿದೆ. ಇದಾದ ಬಳಿಕ ಸಚಿವರು ಹೇಳಿಕೆ ನೀಡಿದ್ದಾರೆ.
ಶುಕ್ರವಾರ ತಡರಾತ್ರಿ ಮತ್ತು ಶನಿವಾರ ಬೆಳಿಗ್ಗೆ ಸರಣಿ ಟ್ವೀಟ್ ಮಾಡಿರುವ ರಿಜಿಜು, 'ಅರವಿಂದ್ ಕೇಜ್ರಿವಾಲ್ ಮತ್ತು ಅವರ ಗ್ಯಾಂಗ್ ಹಿಂದೂ ಮತ್ತು ಹಿಂದುತ್ವವನ್ನು ಏಕೆ ದ್ವೇಷಿಸುತ್ತಾರೆ ಎಂಬುದಕ್ಕೆ ಕಾರಣ ನನಗೆ ತಿಳಿಯುತ್ತಿಲ್ಲ. ನಾನು ರಾಹುಲ್ ಗಾಂಧಿಯನ್ನು ಅರ್ಥಮಾಡಿಕೊಳ್ಳಬಲ್ಲೆ, ಆದರೆ ಅರವಿಂದ ಕೇಜ್ರಿವಾಲ್ ಬಗ್ಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.
إرسال تعليق